ಯಾದಗಿರಿ: ಜಿಲ್ಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ನಾಲ್ಕು ಗುಡಿಸಲು ಸುಟ್ಟು ಭಸ್ಮವಾಗಿರುವಂತ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರದ ಮಲ್ಲಾ ಬಿ ಗ್ರಾಮದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಒಂದು ಸ್ಪೋಟಗೊಂಡಿದೆ. ಇದರ ಪರಿಣಾಮ ಗುಡಿಸಲಿಗೆ ಬೆಂಕಿ ತಗುಲಿ, ಹೊತ್ತಿ ಉರಿದಿದೆ.

ಮಲ್ಲಾ ಬಿ ಗ್ರಾಮದ ಮಲ್ಲಾರೆಡ್ಡಿ ಹಾಗೂ ಮಲ್ಕಪ್ಪ ಎಂಬುವರಿಗೆ ಸೇರಿದಂತೆ ಗುಡಿಸಲು ಸಿಲಿಂಡರ್ ಸ್ಪೋಟದಿಂದ ಹೊತ್ತಿ ಉರಿದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಸತತ ಒಂದು ಗಂಟೆಗಳ ಕಾಲ ಹರಸಾಹಸ ನಡೆಸಿ ಬೆಂಕಿ ನಂದಿಸಿವೆ.

ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂತ್ರಿಗಳೆ ನಿಮ್ಮ ಒಂದು ವರ್ಷದ ಸಾಧನೆ ಏನು?: ಬಸವರಾಜ ಬೊಮ್ಮಾಯಿ ಪ್ರಶ್ನೆ

Prajwal Revanna: ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಗೆ ಕ್ಷಣಗಣನೆ, 8AM: ಏ.8ರಂದೇ ‘ಫೇಸ್ ಬುಕ್’ನಲ್ಲಿ ‘ನವೀನ್ ಗೌಡ ಪೋಸ್ಟ್’

Share.
Exit mobile version