ಮಹಾರಾಷ್ಟ್ರ: ಮಹಾರಾಷ್ಟ್ರ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್ (ಎಂಐಡಿಸಿ) ಪ್ರದೇಶದಲ್ಲಿರುವ ಡೊಂಬಿವಿಲಿಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡು ನಾಲ್ವರು ಸಾವನ್ನಪ್ಪಿದ್ದಾರೆ.
ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದಂತೆ ನಾಲ್ಕಕ್ಕೂ ಹೆಚ್ಚು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿವೆ.
”ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಸಚಿವ ಉದಯ್ ಸಮಂತ್ ಹೇಳಿದ್ದಾರೆ” ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
VIDEO | A fire breaks out in MIDC area, Phase II in Dombivli, Maharashtra. More details are awaited. pic.twitter.com/OUlxvJIdAT
— Press Trust of India (@PTI_News) May 23, 2024
ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಫಡ್ನವೀಸ್ ಡೊಂಬಿವಿಲಿ ಅಗ್ನಿ ದುರಂತದ ಬಗ್ಗೆ ಟ್ವೀಟ್ ಮಾಡಿದ್ದಾರೆ. “ಡೊಂಬಿವಿಲಿ ಎಂಐಡಿಸಿಯ ಅಮುದನ್ ಕೆಮಿಕಲ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಘಟನೆ ದುರಂತ. 8 ಜನರನ್ನು ಅಮಾನತುಗೊಳಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ ಮತ್ತು ಹೆಚ್ಚಿನ ಆಂಬ್ಯುಲೆನ್ಸ್‌ಗಳನ್ನು ಸಿದ್ಧಪಡಿಸಲಾಗಿದೆ. ನಾನು ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿದ್ದೇನೆ ಮತ್ತು ಅವರು ಸಹ ತಲುಪುತ್ತಿದ್ದಾರೆ. 10 ನಿಮಿಷಗಳಲ್ಲಿ ಸ್ಥಳಕ್ಕೆ ಎನ್‌ಡಿಆರ್‌ಎಫ್, ಟಿಡಿಆರ್‌ಎಫ್, ಅಗ್ನಿಶಾಮಕ ದಳಗಳು ಧಾವಿಸಿ, ಬೆಂಕಿ ನಂದಿಸೋ ಕಾರ್ಯದಲ್ಲಿ, ಪರಿಹಾರ ಕಾರ್ಯದಲ್ಲಿ ತೊಡಗಿದ್ದಾವೆ ಅಂತ ಹೇಳಿದೆ.
BREAKING: ಚಿತ್ರದುರ್ಗದಲ್ಲಿ ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ
ಪ್ರಜ್ವಲ್ ರೇವಣ್ಣಗೆ ಬಿಗ್‌ಶಾಕ್: ಪಾಸ್ ಪೋರ್ಟ್’ ರದ್ದತಿ ಪ್ರಕ್ರಿಯೆ ಆರಂಭ, ಶೀಘ್ರದಲ್ಲಿ ಬಂಧನ!