ಮೈಸೂರು : ಅನಿಲ ಸೋರಿಕೆಯಿಂದ ನಾಲ್ವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲೆಯ ಯರಗನಹಳ್ಳಿಗೆ ಭೇಟಿ ನೀಡಲಿದ್ದಾರೆ.
ಮೈಸೂರು ಜಿಲ್ಲೆಯ ಯರಗನಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಯರಗನಹಳ್ಳಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ.
ಅನಿಲ ಸೋರಿಕೆಯಿಂದಾಗಿ ಮೈಸೂರು ಜಿಲ್ಲೆಯ ಯರೆಗನಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ, ಬಟ್ಟೆ ಐರನ್ ಮಾಡುತ್ತಿದ್ದ ಮಂಜುಳ (39), ಕುಮಾರಸ್ವಾಮಿ (45) ಹಾಗೂ ಅರ್ಚನಾ (19), ಸ್ವಾತಿ (17) ಎಂಬುವರ ಮೃತಪಟ್ಟಿದ್ದಾರೆ.