ಮೈಸೂರು : ಮೈಸೂರಿನಲ್ಲಿ ಇಂದು ಘೋರ ದುರಂತವೊಂದು ಸಂಭವಿಸಿದ್ದು, ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಯರೆಗನಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಬಟ್ಟೆ ಐರನ್ ಮಾಡುತ್ತಿದ್ದ ಮಂಜುಳ (39), ಕುಮಾರಸ್ವಾಮಿ (45) ಹಾಗೂ ಅರ್ಚನಾ (19), ಸ್ವಾತಿ (17) ಎಂಬುವರ ಶವಗಳು ಪತ್ತೆಯಾಗಿವೆ.
ಘಟನೆ ಕುರಿತು ಸ್ನೇಹಿತರು ಮಾಹಿತಿ ನೀಡಿದ್ದು, ಎರಡು ದಿನದ ಹಿಂದೆಯೇ ಇವರು ಸಾವನ್ನಪ್ಪಿದ್ದಾರೆ. ಮೃತರು ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದವರು, ಕಳೆದ ೩೦ ವರ್ಷಗಳಿಂದ ಇಲ್ಲೇ ವಾಸವಾಗಿದ್ದಾರೆ. ಸೋಮವಾರ ರಾತ್ರಿಯಿಂದ ಬಾಗಿಲು ತೆರೆಯದೇ ಇದ್ದಾಗ ಅನುಮಾನ ಬಂದು ನೋಡಿದಾಗ ನಾಲ್ವರ ಶವಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.