ಹಾವೇರಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಎನ್ನುವಂತೆ ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವಂತ ಘಟನೆ ನಡೆದಿದೆ. ಆ ಮೂಲಕ ಇನ್ಟಾಗ್ರಾಂನಲ್ಲಿ ಪರಿಚಿತವಾಗಿದ್ದಂತ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದಂತ ನಾಲ್ವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.
ಹಾವೇರಿ ಜಿಲ್ಲೆಯ ಹಾನಗಲ್ ನ ಅಪ್ರಾಪ್ತ ಬಾಲಕಿಯನ್ನು ಇನ್ಟಾ ಗ್ರಾಂನಲ್ಲಿ ಪರಿಚಯಿಸಿಕೊಂಡಿದ್ದರು. ಆಕೆಯನ್ನು ಪುಸಲಾಯಿಸಿ ಕರೆದೊಯ್ದಂತ ಇಬ್ಬರು ಆರೋಪಿಗಳು, ತನ್ನ ಸ್ನೇಹಿತರ ಜೊತೆಗೂಡಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಘಟನೆಯ ನಂತ್ರ ಅಪ್ರಾಪ್ತೆ ಗರ್ಭವತಿಯಾದ ನಂತ್ರ ಕೃತ್ಯ ಬೆಳಕಿಗೆ ಬಂದಿದೆ.
ಈ ಹಿನ್ನಲೆಯಲ್ಲಿ ಹಾನಗಲ್ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದರು. ಈ ದೂರು ಆಧರಿಸಿ ಉದಯ್ ಕರಿಯಣ್ಣನವರ್, ಕಿಶನ್ ವಡ್ಡರ್, ಆಕಾಶ್ ಮಂತಗಿ ಹಾಗೂ ಚಂದ್ರು ಗೊಲ್ಲರ ಎಂಬುವರ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ.
ಈ ಘಟನೆಯು ಕಳೆದ ಮಾರ್ಚ್ ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವಂತ ಹಾನಗಲ್ ಠಾಣೆಯ ಪೊಲೀಸರು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: 2 ಅಂತಸ್ತಿನ ಕಟ್ಟಡಗಳಿಗೆ ‘ಓಸಿ ವಿನಾಯಿತಿ’ ನೀಡಿ ಸರ್ಕಾರ ಅಧಿಕೃತ ಆದೇಶ
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಕೆ.ನಾಗಣ್ಯ ಗೌಡ ಬಿಡುಗಡೆಗೊಳಿಸಿ ಸರ್ಕಾರ ಆದೇಶ








