ಬೆಂಗಳೂರು: ರಾಜ್ಯದಲ್ಲಿ ಸ್ವಲ್ಪ ದಿನ ಬಿಡುವು ಬಿಟ್ಟಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದೆ. ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತವಾರಣವಿದ್ದು, ತುಂತುರು ಮಳೆಯಾಗಿದೆ. ಆದರೆ ರಾಜ್ಯದಲ್ಲಿ ವಿವಿಧೆಡೆ ಮುಂದಿನ ನಾಲ್ಕು ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಟಿಪ್ಪು ಹೆಸರು ತೆಗೆದು, ಒಡೆಯರ್ ಹೆಸರು ರೈಲಿಗೆ ಇಟ್ಟಿದ್ದಕ್ಕೆ ಮಾಜಿ ಸಚಿವ HD ರೇವಣ್ಣ ಆಕ್ಷೇಪ
ಹವಾಮಾನ ವೈಪರೀತ್ಯದಿಂದ ಮಳೆ ಆಗುತ್ತಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.
ಇಲಾಖೆಯ ಮಾಹಿತಿಯಂತೆ, ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಬಿಟ್ಟು ದಿನ ಭಾರಿ ಪ್ರಮಾಣದ ಮಳೆ ಬೀಳಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಟಿಪ್ಪು ಹೆಸರು ತೆಗೆದು, ಒಡೆಯರ್ ಹೆಸರು ರೈಲಿಗೆ ಇಟ್ಟಿದ್ದಕ್ಕೆ ಮಾಜಿ ಸಚಿವ HD ರೇವಣ್ಣ ಆಕ್ಷೇಪ
ಅದೇ ರೀತಿ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 10 ಮತ್ತು 11ರಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣೆಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಉತ್ತಮ ಮಳೆ ಆಗಲಿದೆ.