ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಬೈಕ್, ಶಾಲಾ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.
ಚಿಕ್ಕಬಳ್ಳಾಪುದ ಚಿಂತಾಮಣಿ ತಾಲ್ಲೂಕಿನ ಬುರುಡುಗುಂಟೆ ಬಳಿಯಲ್ಲಿ ಈ ಘಟನೆ ನಡೆದಿದೆ. ಶಾಲಾ ವಾಹನ ಬೈಕಿಗೆ ಡಿಕ್ಕಿಯಾದ ಪರಿಣಾಮ ಒಂದೇ ಬೈಕಿನಲ್ಲಿ ತೆರಳುತ್ತಿದ್ದಂತ ಮೂವರು ಮಕ್ಕಳು ಸೇರಿದಂತೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








