ಡಿಯೋರಿಯಾ: ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಮತ್ತು ಆಕೆಯ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಜಾನೆ 4 ಗಂಟೆಗೆ ಡುಮ್ರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಆರತಿ ದೇವಿ (42), ಆಕೆಯ ಪುತ್ರಿಯರಾದ ಆಂಚಲ್ (14), ಸೃಷ್ಟಿ (11) ಮತ್ತು ಆಕೆಯ ಮಗ ಕುಂದನ್ (12) ಎಂದು ಗುರುತಿಸಲಾಗಿದೆ.
ಸಿಲಿಂಡರ್ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಅಧಿಕಾರಿಗಳು ಸ್ವಲ್ಪ ಸಮಯದ ನಂತರ ನಂದಿಸಿದ್ದಾರೆ ಎಂದು ಡಿಯೋರಿಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಂಕಲ್ಪ್ ಶರ್ಮಾ ತಿಳಿಸಿದ್ದಾರೆ.
ಮಹಿಳೆ ತನ್ನ ಕುಟುಂಬಕ್ಕೆ ಚಹಾ ಮತ್ತು ಉಪಾಹಾರವನ್ನು ತಯಾರಿಸುತ್ತಿದ್ದಾಗ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಅವಳು ಮತ್ತು ಅವಳ ಮೂವರು ಮಕ್ಕಳು ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಬೆಂಕಿಯನ್ನು ನಂದಿಸಲಾಗಿದೆ. ಯಾವುದೇ ಗಾಯಗಳಾಗಿಲ್ಲ. ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಎಸ್ಪಿ ಹೇಳಿದರು.