ಇಸ್ಲಾಮಾಬಾದ್: ಬಲೂಚಿಸ್ತಾನ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ನ ಮೂವರು ಸದಸ್ಯರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಇಮ್ರಾನ್ ಖಾನ್ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೆಲವೇ ಗಂಟೆಗಳ ನಂತರ ಪಕ್ಷ ಆಯೋಜಿಸಿದ್ದ ರ್ಯಾಲಿಯಲ್ಲಿ ಸ್ಫೋಟ ಸಂಭವಿಸಿದೆ.
“ತೆಹ್ರೀಕ್-ಇ-ಇನ್ಸಾಫ್ನ ಮೂವರು ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ” ಎಂದು ಬಲೂಚಿಸ್ತಾನದ ಪ್ರಾಂತೀಯ ಪ್ರಧಾನ ಕಾರ್ಯದರ್ಶಿ ಸಲಾರ್ ಖಾನ್ ಕಾಕರ್ ಪಿಟಿಐ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.