BREAKING: ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸ್ಪೋಟ: ಮೂವರು ಮಹಿಳೆಯರು ಸೇರಿ ನಾಲ್ವರಿಗೆ ಗಂಭೀರ ಗಾಯ

ಹಾಸನ: ಜಿಲ್ಲೆಯಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೋಡು ತಾಲ್ಲೂಕಿನ ಕೊಣನೂರಿನಲ್ಲಿ ಇಂದು ಈ ಘಟನೆ ನಡೆದಿದೆ. ಪಟೇಲ್ ರಾಮೇಗೌಡ ಎಂಬುವರ ಮನೆಯಲ್ಲಿ ತಿಥಿ ಕಾರ್ಯದ ನಿಮಿತ್ತ ಸಿಹಿ ತಿಂಡಿ ತಯಾರಿಕೆಯಲ್ಲಿ ತೊಡಿಗಿದ್ದಾಗ ಈ ದುರ್ಘಟನೆ ನಡೆದಿದೆ. ಸಿಲಿಂಡರ್ ಸ್ಟೋಟದಲ್ಲಿ ಮೀನಾಕ್ಷಿ, ಮಂಗಳಾ, ರಾಧಾ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. … Continue reading BREAKING: ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸ್ಪೋಟ: ಮೂವರು ಮಹಿಳೆಯರು ಸೇರಿ ನಾಲ್ವರಿಗೆ ಗಂಭೀರ ಗಾಯ