ಸುಭಾಷಿತ :

Monday, February 24 , 2020 2:03 AM

ಭೀಕರ ರಸ್ತೆ ಅಪಘಾತ : ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರ ದುರ್ಮರಣ


Sunday, January 26th, 2020 5:25 pm

ಧಾರವಾಡ : ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,  ಕುಂದಗೊಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 4ರ ಯರಿಕೊಪ್ಪ ಬಳಿ ಇಂದು  ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ವೇಳೆ ಇಂಡಿಕಾ ಕಾರಿನ ಮುಂಭಾಗದಲ್ಲಿ ಕುಳಿತಿದ್ದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಹಾಗೂ ಚಿಕ್ಕೊಡಿ ತಾಲೂಕಿನ ಕಬ್ಬೂರು ಗ್ರಾಮದ ಚಾಲಕ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬಸಪ್ಪ ಪೂಜಾರ, ಸಿದ್ದಪ್ಪ ಇಂಗಳಳ್ಳಿ, ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಸಂಬಂಧಿ ಸೋಮಣ್ಣ ದೇಸಾಯಿ ಗಾಯಗೊಂಡಿದ್ದಾರೆ. ಅವರೆಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮತ್ತೊಂದು ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಅವರ ಗುರುತು ಪತ್ತೆಯಾಗಿಲ್ಲ…

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions