ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ತಿಗೆ ನಾಲ್ವರನ್ನು ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿತ್ತು. ಇಂದು ಅವರು ನೂತನ ವಿಧಾನ ಪರಿಷತ್ ನಾಮ ನಿರ್ದೇಶಿತ ಸದಸ್ಯರಾಗಿ ರಮೇಶ್ ಬಾಬು ಸೇರಿದಂತೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇಂದು ವಿಧಾನ ಸೌಧದ ಬ್ಯಾಕ್ವೆಟ್ ಹಾಲ್ ನಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ನೂತನ ನಾಮ ನಿರ್ದೇಶಿಸಿತ ವಿಧಾನಸಭಾ ಸದಸ್ಯರಾಗಿ ರಮೇಶ್ ಬಾಬು, ಆರತಿ ಕೃಷ್ಣ, ಜಕ್ಕಪ್ಪನವರ್ ಹಾಗೂ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಅವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಮಾಣವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ ಪಾಟೀಲ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.