ರಾಯಚೂರು: ಜಿಲ್ಲೆಯಲ್ಲಿ ಖೋಟಾನೋಟು ದಂಧೆಯಲ್ಲಿ ತೊಡಗಿದ್ದಂತ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಸಶಸ್ತ್ರ ಮೀಸಲಿ ಪಡೆಯ ಕಾನ್ಸ್ ಸ್ಟೇಬಲ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಯಚೂರಿನ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಖೋಟಾನೋಟು ದಂಧೆಯಲ್ಲಿ ತೊಡಗಿದ್ದಂತ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಯಚೂರು ಸಶಸ್ತ್ರ ಮೀಸಲು ಪಡೆಯ ಕಾನ್ಸ್ ಸ್ಟೇಬಲ್ ಮರಿಲಿಂಗ, ರಮೇಶ್ ಆದಿ, ಶಿವಲಿಂಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಯಚೂರು ಪೊಲೀಸರಿಗೆ ಖಚಿತ ಮಾಹಿತಿ ಮೇರೆಗೆ ಈ ದಾಳಿಯನ್ನು ನಡೆಸಿದ್ದಾರೆ. ನಗರದಲ್ಲಿ ನಡೆಯುತ್ತಿದ್ದಂತ ಖೋಟಾ ನೋಟು ದಂಧೆಯ ಜಾಲವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಸಶಸ್ತ್ರ ಮೀಸಲು ಪಡೆಯ ಕಾನ್ಸ್ ಸ್ಟೇಬಲ್ ಒಬ್ಬರು ಈ ದಂಧೆಯಲ್ಲಿ ಭಾಗಿಯಾದ ಬಗ್ಗೆ ಅಚ್ಚರಿಯನ್ನು ವ್ಯಕ್ತಪಡಿಸಿದ್ದಾರೆ. ಇದೀಗ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
ಮೇನಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ: ನನಗೂ ಸಚಿವ ಸ್ಥಾನ ಸಿಗುವ ಭರವಸೆ ಇದೆ- ಸಲೀಂ ಅಹ್ಮದ್
BIG NEWS: `ಇ ಖಾತಾ’ ಇಲ್ಲದೆ ಆಸ್ತಿ ನೋಂದಣಿ ಇಲ್ಲ: ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ.!