ಉತ್ತರ ಕನ್ನಡ: ಜಿಲ್ಲೆಯಲ್ಲಿ ಅರಬ್ಬಿ ಸಮುದ್ರದ ನೀರಿಗೆ ಇಳಿದಿದ್ದಂತ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿ ಹೋಗಿರುವಂತ ಘಟನೆ ನಡೆದಿದೆ. ಇವರಲ್ಲಿ ಓರ್ವ ಶವವಾಗಿ ಪತ್ತೆಯಾಗಿದ್ದರೇ, ಇನ್ನೂ ಮೂವರ ಪತ್ತೆಗಾಗಿ ಶೋಧಕಾರ್ಯ ಮುಂದುವರೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕೊತ್ತೂರು ಮುರಾರ್ಜಿ ದೇಸಾಯಿ ವಸತಿ ಶಾಲೆಯ 54 ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದ ಅರಬ್ಬಿ ಸಮುದ್ರದಲ್ಲಿ ಆಟವಾಡಲು ಶಾಲಾ ಮಕ್ಕಳು ಇಳಿದಿದ್ದರು. ಈ ಸಂದರ್ಭದಲ್ಲಿ ಅರಬ್ಬಿ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗೆ ನಾಲ್ವರು ಕೊಚ್ಚಿ ಹೋಗಿದ್ದಾರೆ.
ಕೊಚ್ಚಿ ಹೋಗಿರುವಂತ ನಾಲ್ವರಲ್ಲಿ ಓರ್ವ ಶಾಲಾ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಇನ್ನೂ ಮೂವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಅವರ ಪತ್ತೆಗಾಗಿ ಈಜುಗಾರರು ಹುಡುಕಾಟ ನಡೆಸುತ್ತಿದ್ದಾರೆ.