ಭರೂಚ್: ಗುಜರಾತ್ನ ಭರೂಚ್ ಜಿಲ್ಲೆಯ ಅಂಕಲೇಶ್ವರ ಜಿಐಡಿಸಿ ಪ್ರದೇಶದ ಕೈಗಾರಿಕಾ ಘಟಕದಲ್ಲಿ ಮಂಗಳವಾರ ಮಧ್ಯಾಹ್ನ ಶೇಖರಣಾ ಟ್ಯಾಂಕ್ ಸ್ಫೋಟಗೊಂಡು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೈಗಾರಿಕಾ ತ್ಯಾಜ್ಯ ಸಂಸ್ಕರಣೆಯಲ್ಲಿ ತೊಡಗಿರುವ ಡಿಟಾಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಆವರಣದಲ್ಲಿರುವ ಶೇಖರಣಾ ಟ್ಯಾಂಕ್ ಮೇಲೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಮಯೂರ್ ಚಾವ್ಡಾ ತಿಳಿಸಿದ್ದಾರೆ.
ಹೆಚ್ಚಿನ ತನಿಖೆಗಾಗಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಚಾವ್ಡಾ ಹೇಳಿದರು.
BREAKING: ರಾಜ್ಯ ಔಷಧ ನಿಯಂತ್ರಣ ಇಲಾಖೆಯ ಮುಖ್ಯಸ್ಥರನ್ನಾಗಿ IAS ಅಧಿಕಾರಿ ಶ್ರೀನಿವಾಸ ನೇಮಕ