5 ರಿಂದ 17 ವರ್ಷ ವಯೋಮಿತಿಯ ಮಕ್ಕಳಿಗೆ ಆಧಾರ್ ಸಂಖ್ಯೆಯ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಸರ್ಕಾರವು ಅವಕಾಶ ಕಲ್ಪಿಸಿದೆ.
5 ರಿಂದ 17 ವರ್ಷ ವಯೋಮಿತಿಯ ಮಕ್ಕಳಿಗೆ ಆಧಾರ್ ಸಂಖ್ಯೆಯ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಲು ಸೆಪ್ಟೆಂಬರ್ 30, 2026 ರವರೆಗೆ ಕಾಲಾವಕಾಶ ನೀಡಲಾಗಿದೆ. ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಈ ಸೇವೆ ಸಂಪೂರ್ಣ ಉಚಿತವಾಗಿ ಲಭ್ಯವಿರುತ್ತದೆ.
ಅಗತ್ಯ ದಾಖಲೆಗಳು: ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಸಂಬಂಧಿಸಿದ ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಕೇಂದ್ರಕ್ಕೆ ಭೇಟಿ ನೀಡಬೇಕು.
ಅಪ್‌ಡೇಟ್ ಏಕೆ ಅಗತ್ಯ?
ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್‌ಡೇಟ್ ಮಾಡಿಸುವುದರಿಂದ ಈ ಕೆಳಗಿನ ಪ್ರಯೋಜನಗಳನ್ನು ಪಡೆಯಲು ಅನುಕೂಲವಾಗಲಿದೆ:
ಶಾಲಾ ದಾಖಲಾತಿ ಪ್ರಕ್ರಿಯೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಲು.
ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು.
ವಿದ್ಯಾರ್ಥಿ ವೇತನ (Scholarship) ಮತ್ತು ತರಬೇತಿ ಸೌಲಭ್ಯಗಳ ಪ್ರಯೋಜನ ಪಡೆಯಲು.
ಜಿಲ್ಲೆಯ ಎಲ್ಲಾ ಪೋಷಕರು ಜವಾಬ್ದಾರಿಯಿಂದ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಮಕ್ಕಳಿಗೆ ಸರ್ಕಾರದ ಯೋಜನೆಗಳು ತಲುಪುವಲ್ಲಿ ಸಹಕರಿಸಬೇಕೆಂದು ಜಿಲ್ಲಾಡಳಿತವು ಈ ಮೂಲಕ ಕೋರಿದೆ.
ಗ್ರಾಮ ಪಂಚಾಯತ್‌ಗಳು ಮತ್ತು ಸ್ಥಳೀಯ ಸಂಸ್ಥೆಗಳ ಮೂಲಕ ಈ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.









