ವಿಜಯಪುರ : ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭವನ್ನು ಆಚರಿಸಲು ಜನವರಿ 18 ರಿಂದ ಜನವರಿ 22 ರವರೆಗೆ ಉಚಿತ ಹೆರಿಗೆಯ ಸೌಲಭ್ಯ ಒದಗಿಸುವುದಾಗಿ ಜೆಎಸ್ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಿದೆ. ಜೆಎಸ್ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಡೆಸುತ್ತಿರುವ ‘ಶ್ರೀ ಸಿದ್ದೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್’ ಈ ನಿರ್ಧಾರವನ್ನು ಪ್ರಕಟಿಸಿದೆ.
ಇಂದಿನಿಂದ ಆರಂಭಗೊಂಡು, ಅಯೋಧ್ಯೆಯಲ್ಲಿ ಸೋಮವಾರ ನಡೆಯಲಿರುವ ‘ರಾಮಮಂದಿರ ಪ್ರಾಣ ಪ್ರತಿಷ್ಠಾ ದಿನವನ್ನು ಆಚರಿಸಲು ಜನವರಿ 22 ರವರೆಗೆ ನಮ್ಮ ಆಸ್ಪತ್ರೆಯಲ್ಲಿ ಹೆರಿಗೆಯನ್ನು ಉಚಿತವಾಗಿ ಮಾಡಲಾಗುತ್ತದೆ. ಇದು ಒಂದು ದೊಡ್ಡ ಸಂದರ್ಭವಾಗಿದೆ ಮತ್ತು ನಾವು ಮಹತ್ವದ ರೀತಿಯಲ್ಲಿ ಕೊಡುಗೆ ನೀಡಲು ಬಯಸುತ್ತೇವೆ. ಹೀಗಾಗಿ ಐದು ದಿನಗಳ ಕಾಲ ನಮ್ಮ ಆಸ್ಪತ್ರೆಯಲ್ಲಿ ನಡೆಯುವ ಎಲ್ಲಾ ಹೆರಿಗೆಗಳನ್ನು ಉಚಿತವಾಗಿ ಮಾಡಲಾಗುವುದು ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.