ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವ ಕುರಿತು ಸನ್ಮಾನ್ಯ ಮುಖ್ಯಮಂತ್ರಿಯವರು ವಿಧಾನ ಮಂಡಲದಲ್ಲಿ ಮಂಡಿಸಿರುವ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ 102 ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ.
“ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ”.
ಮುಂದುವರೆದು ಶಾಲೆಗಳು ಶಿಕ್ಷಣಕ್ಕೆ ಪ್ರಥಮ ವೇದಿಕೆಯಾಗಿದ್ದು, ರಾಜ್ಯದ ಬಡ, ಮಧ್ಯಮ ವರ್ಗದ ಕುಟುಂಬಗಳ ಮಕ್ಕಳು ವಿದ್ಯಾಭ್ಯಾಸ ಪಡೆಯಲು ಸರ್ಕಾರಿ ಶಾಲೆಗಳು ಪ್ರಮುಖ ಪಾತ್ರವಹಿಸುತ್ತಿದ್ದು, ಸರ್ಕಾರಿ ಶಾಲೆಗಳ ಉನ್ನತೀಕರಣ ಹಾಗೂ ಅವುಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ‘ಗೃಹ ಜ್ಯೋತಿ ಯೋಜನೆಯಡಿ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ಒದಗಿಸುತ್ತಿರುವ ರೀತಿಯಲ್ಲಿಯೇ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೂ ಸಹ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು. ಉಲ್ಲೇಖ(1 ಮತ್ತು 3)ರಲ್ಲಿ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ.
ಈ ಕುರಿತು ಸದರಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಉಲ್ಲೇಖ(4)ರ ಸರ್ಕಾರದ ನಿರ್ದೇಶನದಂತೆ ಆಯಾ ಸಂಬಂಧಪಟ್ಟ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಯು ಒಳಪಡುವ ವಿದ್ಯುತ್ ಸರಬರಾಜು ಕಂಪನಿಗಳ ಉಪ ವಿಭಾಗ / ಶಾಖಾ ಕಚೇರಿಯಲ್ಲಿ ಶಾಲೆಯ ವಿದ್ಯುತ್ ಸ್ಥಾವರಗಳ ಮಾಹಿತಿಯನ್ನು (RR ಸಂಖ್ಯೆ ಮತ್ತು ಬಳಕೆದಾರರ ID ಸಂಖ್ಯೆ) ಕಡ್ಡಾಯವಾಗಿ ದಿನಾಂಕ: 31/07/2024 ರೊಳಗೆ ಅದ್ಯತೆ ಮೇರೆಗೆ ನೊಂದಣಿ ಮಾಡಿಸುವಂತೆ ಸೂಚಿಸಿದೆ.