ಮಂಡ್ಯ : ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26 ರ ಶುಕ್ರವಾರದಿಂದ ಐದು ದಿನಗಳ ಕಾಲ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ.
ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ, ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ಕಣ್ತುಂಬಿಕೊಳ್ಳಲಿದ್ದಾರೆ.
ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಚಿತವಾಗಿ ಹಂಚಲು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲಾಡು ಮಾಡಿಸಿದ್ದಾರೆ.
ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. “ಕಾವೇರಿ ಆರತಿ” ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಾಡನ್ನು ಉಚಿತವಾಗಿ ವಿತರಣೆ ಮಾಡಲಾಗುವುದು.
ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್ ಎಸ್ ವೀಕ್ಷಣೆಗೆ ದಿನಂಪ್ರತಿ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಕಾವೇರಿ ಆರತಿ ವೀಕ್ಷಿಸಲು ಆಗಮಿಸಲಿದ್ದಾರೆ. ಹೀಗಾಗಿ ಅವರಿಗೆ ಲಾಡು ವಿತರಣೆ ವ್ಯವಸ್ಥೆ ಮಾಡಲಾಗಿದೆ.
ಸಂಪ್ರದಾಯಗಳನ್ನು ಒಳಗೊಂಡ ಕಾವೇರಿ ಆರತಿ ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ನೆರವೇರುತ್ತಿದ್ದು, ಇದಕ್ಕೆ ಕೃಷ್ಣರಾಜಸಾಗರ ಸಾಕ್ಷಿಯಾಗಲಿದೆ.
ಸೆಪ್ಟೆಂಬರ್ 26 ರ ಶುಕ್ರವಾರ ಸಂಜೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ.
ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ 47 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ