ಬೆಂಗಳೂರು: ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವಂತ 6 ರಿಂದ 12ನೇ ತರಗತಿ ವರೆಗಿನ ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ ಮಾಡಲಾಗುತ್ತದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಶುಚಿ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿನ 6 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣುಮಕ್ಕಳಿಗೆ ಹಾಗೂ ವಸತಿ ನಿಲಯಗಳಲ್ಲಿನ (ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, KREIS, ಪರಿಶಿಷ್ಟ ಪಂಗಡ ಇಲಾಖೆ) ಒಟ್ಟು 19,64,507 ಹೆಣ್ಣುಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್ ಪ್ಯಾಡ್‌ಗಳನ್ನು ಒದಗಿಸಿದ್ದೇವೆ. ಮುಟ್ಟಿನ ಕಪ್ʼ ಯೋಜನೆಯಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಟ್ಟು 9,44,466 ಹೆಣ್ಣುಮಕ್ಕಳಿಗೆ ಮುಟ್ಟಿನ ಕಪ್ ಅನ್ನು ಒದಗಿಸಲು ಇಲಾಖೆ ಸಜ್ಜಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.
ಶುಚಿ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿನ 6 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣುಮಕ್ಕಳಿಗೆ ಹಾಗೂ ವಸತಿ ನಿಲಯಗಳಲ್ಲಿನ (ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, KREIS, ಪರಿಶಿಷ್ಟ ಪಂಗಡ ಇಲಾಖೆ) ಒಟ್ಟು 19,64,507… pic.twitter.com/QibCy2GrWF
— DIPR Karnataka (@KarnatakaVarthe) January 23, 2026
ಗರ್ಭಕಂಠದ ಕಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದು, ಕಲ್ಯಾಣ ಕರ್ನಾಟಕ ಮತ್ತು ಸುತ್ತಮುತ್ತಲ ಭಾಗದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಂದು ಲಕ್ಷಕ್ಕೂ ಅಧಿಕ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲಾಗುತ್ತದೆ. ಈ ಯೋಜನೆಯನ್ನು ಸದ್ಯದಲ್ಲೇ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಗರ್ಭಕಂಠ ಕಾನ್ಸರ್ ನಿರ್ಮೂಲನೆ ಮಾಡುವುದು ನಮ್ಮ ಆದ್ಯತೆಯ ಕಾರ್ಯಕ್ರಮಗಳಲ್ಲೊಂದಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ನಿಯಮ ಪಾಲಿಸಿದರೇ ಮಾತ್ರ ‘ಬಸ್’ಗಳಿಗೆ ಸಾಮರ್ಥ್ಯ ಪ್ರಮಾಣಪತ್ರ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಈ ಖಡಕ್ ಸೂಚನೆ ಕೊಟ್ಟ ಸಚಿವ ಈಶ್ವರ್ ಖಂಡ್ರೆ








