ಬಳ್ಳಾರಿ : ರಾಜ್ಯ ಬಾಲಭವನ ಸೊಸೈಟಿ, ಬೆಂಗಳೂರು ಇವರ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದು, ಶಿಬಿರವು 15 ದಿನಗಳ ಕಾಲ ಬೆಳಿಗ್ಗೆ 09 ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯ ವರೆಗೆ ನಡೆಯಲಿದೆ.
ಶಿಬಿರವು ವಿವಿಧ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲೆ, ಜೇಡಿಮಣ್ಣಿನ ಕಲೆ, ಸಮೂಹ ಸಂಗೀತ, ಸಮೂಹ ನೃತ್ಯ, ಯೋಗ, ಕರಾಟೆ, ಇತರೆ ಚಟುವಟಿಕೆಗಳು ನಡೆಯಲಿದ್ದು, ಕಾರ್ಯಕ್ರಮಕ್ಕೆ 05 ರಿಂದ 16 ವರ್ಷದೊಳಗಿನ ಆಸಕ್ತಿಯುಳ್ಳ ಸರಕಾರಿ ಶಾಲೆ ಮಕ್ಕಳು, ಗ್ರಾಮೀಣ ಪ್ರದೇಶ ಹಾಗೂ ಸೌಲಭ್ಯ ವಂಚಿತ ಮಕ್ಕಳಿಗೆ ಸುಧಾರಣಾ ಸಂಸ್ಥೆಗಳ ಬಾಲಕರು-ಬಾಲಕಿಯರ ಬಾಲ ಮಂದಿರದ ಮಕ್ಕಳಿಗೆ ಮೊದಲನೇ ಆದ್ಯತೆ ಹಾಗೂ ಬೇಸಿಗೆ ಶಿಬಿರದ ಚಟುವಟಿಕೆಗಳಲ್ಲಿ 100 ಮಕ್ಕಳಿಗೆ ಮಾತ್ರ ಭಾಗವಹಿಸಲು ಅವಕಾಶ ಇರುತ್ತದೆ.
ಹಾಗಾಗಿ ಮೇ 12 ರಂದು ಸಂಜೆ 05 ಗಂಟೆಯೊಳಗಾಗಿ ನೋಂದಾಯಿಸಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಂರ್ಪಕಿಸಬಹುದು.
ಮೊದಲು ಬಂದು ತಮ್ಮ ಮಕ್ಕಳ ಹೆಸರು ನೋಂದಾಯಿಸಿದಲ್ಲಿ ಬೇಸಿಗೆ ಶಿಬಿರ ಚಟುವಟಿಕೆಗಳಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.08392-266219, ಕಚೇರಿ ಸಹಾಯಕ ಜೀರ್ ಮಲ್ಲಿಕಾರ್ಜುನ (ಮೊ.9741965198) ಇವರಿಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING: ಪಾಕಿಸ್ತಾನ ಕ್ರಿಕೆಟಿಗರಾದ ಬಾಬರ್ ಅಜಮ್, ಮೊಹಮ್ಮದ್ ರಿಜ್ವಾನ್ ಇನ್ಸ್ಟಾ ಗ್ರಾಮ್ ಖಾತೆ ನಿಷೇಧಿಸಿದ ಭಾರತ
ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ