ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ಮಹಾಮಾರಿ ಕೊರೊನಾ ಆತಂಕ ಮನೆ ಮಾಡಿದ್ದು, ರಾಜ್ಯದ ಜನರು ಆತಂಕದಲ್ಲಿದ್ದಾರೆ. ಕೊರೊನಾ ರೂಪಾಂತರ ತಳಿ ಬಿಎಫ್.7 ಸೋಂಕು ಪತ್ತೆಯಾದ ರೋಗಿಗಳಿಗೆ ರಾಜ್ಯದಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಘೋಷಣೆ ಮಾಡಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅಶೋಕ್ ಕೊರೊನಾ ರೂಪಾಂತರ ತಳಿ ಬಿಎಫ್.7 ಸೋಂಕು ಪತ್ತೆ ಹಿನ್ನೆಲೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಹೊಸ ಮಾರ್ಗಸೂಚಿ ಜಾರಿಗೆ ತರಲಾಗಿದೆ ಎಂದು ಸಚಿವ ಅಶೋಕ್ ಹೇಳಿದ್ದಾರೆ.
ಬಿಎಫ್.7 ಸೋಂಕು ಪತ್ತೆಯಾದ ರೋಗಿಗಳನ್ನು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಸೋಂಕು ಪತ್ತೆಯಾದ ರೋಗಿಗಳಿಗೆ ರಾಜ್ಯದಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಸಚಿವ ಆರ್. ಅಶೋಕ ಹೇಳಿದ್ದಾರೆ, ನಗರದಲ್ಲಿ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆವು. ಬೆಂಗಳೂರಿನಲ್ಲಿ ಬಿಬಿಎಂಪಿ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಹಾಸಿಗೆ ಲಭ್ಯತೆ ಕುರಿತು ಮಾಹಿತಿ ಸಂಗ್ರಹಿಸುತ್ತಿದೆ ಎಂದು ಹೇಳಿದರು.
ಬಾರ್, ಪಬ್ಗಳಲ್ಲಿ ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡ್ಬೋದು
ಬಾರ್, ಪಬ್ಗಳಲ್ಲಿ ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡ್ಬೋದು ಅಂತ ಕಂದಾಯ ಸಚಿವ ಆರ್ ಆಶೋಕ್ ಅವರು ಹೇಳಿದ್ದಾರೆ. ಚೀನಾದಲ್ಲಿ ಕೋವಿಡ್ ನ ರೂಪಾಂತರ ತಳಿಯ ಹಾವಳಿ ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕೂಡ ಅನೇಕ ಮಾರ್ಗಸೂಚಿಗಳನ್ನು ಕೂಡ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ಈ ನಿಟ್ಟಿನಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಮಾತನಾಡಿ ಸಚಿವ ಆರ್ ಅಶೋಕ್ ಅವರು ಮಾಸ್ಕ್ ಹಾಕಿಕೊಂಡು ಬಾರ್ ಪಬ್ಗಳಲ್ಲಿ ಪ್ರವೇಶ ನೀಡುವುದಕ್ಕೆ ಸಂಬಂಧಫಟ್ಟಂತೆ ಮಾಲೀಕರಿಂದ ವಿರೋಧ ವ್ಯಕ್ತಪಡಿಸಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಬಾರ್, ಪಬ್ಗಳಲ್ಲಿ ಕುಳಿತು ಡ್ರಿಂಕ್ಸ್ ಮಾಡಲು ಸ್ಪೆಷಲ್ ಮಾಸ್ಕ್ ಇದ್ದು, ಅವುಗಳನ್ನು ಹಾಕಿಕೊಂಡು ಕುಡಿಯಬಹುದಾಗಿದೆ ಅಂತ ಹೇಳಿದರು, ಇದರಿಂದ ಯಾರಿಗೂ ಯಾವುದೇ ರೀತಿಯಲ್ಲಿ ತೊಂದರೆಯಾಗುವುದಿಲ್ಲ ಅಂತ ತಿಳಿಸಿದರು.
BIGG NEWS : ಜನವರಿ ಮಧ್ಯದಲ್ಲಿ ಕೊರೊನಾ ಪ್ರಕರಣ ಏರಿಕೆ, ಮುಂದಿನ 40 ದಿನ ನಿರ್ಣಾಯಕ ; ಆರೋಗ್ಯ ಸಚಿವಾಲಯ