ಬಳ್ಳಾರಿ: ಕಾಂಗ್ರೆಸ್ ನಿಂದಲೇ ಸ್ವಾತಂತ್ರ್ಯ ಸಿಕ್ಕಿದೆ. ಆದರೆ ಸ್ವಾತಂತ್ರ್ಯದ ಹೋರಾಟವನ್ನು ಬಿಜೆಪಿ ಅವರು ಮಾಡಿಲ್ಲ. ಹೀಗಾಗಿ ಅವರಿಂದ ನಾವೆಲ್ಲ ದೇಶಭಕ್ತಿ ಕಲಿಯುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಕಿಡಿಕಾರಿದ್ದಾರೆ.
BIGG NEWS: ಮತಾಂತರ ಮಾಡುವುದೇ ಒಡನಾಡಿ ಸಂಸ್ಥೆಯ ಮೂಲ ಉದ್ದೇಶ: ಮುರುಘಾ ಮಠದ ಸಲಹಾ ಸಮಿತಿ ಸದಸ್ಯ ಗಂಭೀರ ಆರೋಪ
ನಗರದಲ್ಲಿ ಮಾತನಾಡಿದ ಅವರು, 2014 ರಿಂದ ದೇಶ ಸಾಕಷ್ಟು ಹಿನ್ನೆಡೆ ಅನುಭವಿಸಿದೆ. ಬದುಕೋಕು ಬಿಡಲ್ಲ ಸಾಯೋಕು ಬಿಡಲ್ಲ ಸತ್ತ ಮೇಲೂ ಬಿಡೋದಿಲ್ಲ ಅಷ್ಟೊಂದು ಜಿಎಸ್ಟಿ ಹಾಕ್ತಾರೆ. 40% ಭ್ರಷ್ಟಾಚಾರ ಮಾಡಿರೋ ಸರ್ಕಾರ ಕಾಂಟ್ರಾಕ್ಟರ್ ಗಳೇ ಈ ಬಗ್ಗೆ ದೂರನ್ನು ನೀಡಿದ್ದಾರೆ. ಐಟಿ, ಸಿಬಿಐ, ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಹತ್ತಿರ ಬರುತ್ತಿದ್ದಂತೆ 40% ದಿಂದ 80% ಕ್ಕೆ ಹೋದರೂ ಅಚ್ಚರಿಯಿಲ್ಲ. ಹಿಜಬ್, ಹಲಾಲ್, ಪಠ್ಯ ಪುಸ್ತಕ ಗೊಂದಲ. ಇದೇ ಈ ಸರ್ಕಾರದ ಸಾಧನೆ. ಲಿಂಗಾಯತ ಮಠವಲ್ಲ ಎಲ್ಲಾ ಸಮುದಾಯದ ಮಠಕ್ಕೆ ಹೋಗಿದ್ದೇನೆ ಎಂದಿದ್ದಾರೆ.