ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆಯನ್ನು ದಿನಾಂಕ:22-09-2025 ರಿಂದ 07-10-2025ರವರೆಗೆ ಕೈಗೊಳ್ಳುವಂತೆ ಸರ್ಕಾರ ಅಧಿಕೃತ ಆದೇಶಿಸಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಹೇಳಿದಂತೆ ಜಾತಿಗಣತಿ ಸಮೀಕ್ಷೆ ಮುಂದೂಡಿಕೆ ಇಲ್ಲ. ನಿಗದಿಯಂತೆ ನಡೆಯುವುದು ಖಚಿತವಾದಂತೆ ಆಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸರ್ಕಾರದ ಅನುಮೋದನ ನೀಡಿ ಆದೇಶಿಸಿದೆ.
ಅಧ್ಯಕ್ಷರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಇವರು ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ದಿನಾಂಕ:22-09-2025 ರಿಂದ 07-10-2025ರವರೆಗೆ ಕೈಗೊಳ್ಳಲು ಉದ್ದೇಶಿಸಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ರವರಿಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಹಾಗೂ ಸಮೀಕ್ಷಾದಾರರಿಗೆ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಹಾಗೂ ಸಾರ್ವಜನಿಕರನ್ನು ಸಮೀಕ್ಷಾ ಕಾರ್ಯದಲ್ಲಿ ಪೂರ್ಣವಾಗಿ ಪಾಲ್ಗೊಳ್ಳಲು ಅರಿವು ಮೂಡಿಸಲು ತಿಳಿಸಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ, ದಿನಾಂಕ:22-09-2025 ರಿಂದ 07-10-2025ರ ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ರಾಜ್ಯಾದ್ಯಂತ ಕೈಗೊಳ್ಳಲು ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಿ ಪುಸ್ತಾವನೆ ಸಲ್ಲಿಸಿರುತ್ತಾರೆ. ಪುಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತ ಆದೇಶಿಸಿದೆ.
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ದಿನಾಂಕ:22-09-2025 ರಿಂದ 07-10-2025ರ ವರೆಗೆ ಕೈಗೊಳ್ಳಲು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ ಎಂದು ಹೇಳಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
BREAKING: ಧರ್ಮಸ್ಥಳ ಕೇಸ್: ಆರೋಪಿ ಚಿನ್ನಯ್ಯನ ಮಹೇಶ್ ತಿಮರೋಡಿ ಭೇಟಿಯಾಗಿದ್ದ ಮತ್ತೊಂದು ವಿಡಿಯೋ ರಿಲೀಸ್
ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ