ಬೆಂಗಳೂರು: ಪ್ರತಿ ಲೀಟರ್ ಹಾಲಿಗೆ ₹ 3 ಹೆಚ್ಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ (Karnataka Milk Federation – KMF) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಸಲ್ಲಿಸಿದ್ದಾರೆ. ಸೆ.1ರಿಂದಲೇ ಪರಿಷ್ಕೃತ ದರ ಜಾರಿ ಸಾಧ್ಯತೆಯಿದೆ.
BIGG NEWS: ಚಿಕ್ಕಬಳ್ಳಾಪುರದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಸಚಿವ ಸುಧಾಕರ್ ಭೇಟಿ; ರೈತರಿಗೆ ಪರಿಹಾರ ವಿತರಣೆ
15 ಹಾಲು ಒಕ್ಕೂಟಗಳು ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿವೆ. ಕಳೆದ ಮೂರು ವರ್ಷಗಳ ಹಿಂದೆ ಸರ್ಕಾರ ಹಾಲಿನ ದರ ಪ್ರತಿ ಲೀಟರ್ಗೆ 2 ರೂ. ಏರಿಕೆ ಮಾಡಿತ್ತು. ಬಳಿಕ ಸರ್ಕಾರ ಹಾಲಿನ ದರವನ್ನು ಏರಿಕೆ ಮಾಡಲೇ ಇಲ್ಲ. ಹಲವು ಬಾರಿ ಸರ್ಕಾರಕ್ಕೆ ದರ ಏರಿಕೆ ಪ್ರಸ್ತಾವ ಸಲ್ಲಿಸಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಆದರೆ ಈ ಬಾರಿ ದರ ಏರಿಕೆ ಮಾಡಲೇಬೇಕು ಎಂದು ಕೆಎಂಎಫ್ ಒತ್ತಾಯಿಸಿದೆ.
BIGG NEWS: ಚಿಕ್ಕಬಳ್ಳಾಪುರದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಸಚಿವ ಸುಧಾಕರ್ ಭೇಟಿ; ರೈತರಿಗೆ ಪರಿಹಾರ ವಿತರಣೆ
ಈಗ ಲೀಟರ್ಗೆ 37 ರೂಪಾಯಿ ನೀಡುತ್ತಿದ್ದಾರೆ. 3 ರೂಪಾಯಿ ದರ ಏರಿಕೆ ಮಾಡಿದರೆ, 40 ರೂಪಾಯಿ ಏರಿಕೆ ಆಗಲಿದೆ. ಬೇರೆ ರಾಜ್ಯಗಳಲ್ಲಿ ಹೆಚ್ಷಿನ ಬೆಲೆಗೆ ಹಾಲು ಮಾರಾಟ ಮಾಡುತ್ತಾರೆ. ಆದರೆ ನಮ್ಮ ರಾಜ್ಯದಲ್ಲಿ ಕೆಎಂಎಫ್ನಿಂದ ಕಡಿಮೆ ಬೆಲೆಗೆ ಹಾಲು ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ದರ ಏರಿಕೆ ಪ್ರಸ್ತಾವವನ್ನು ಸರ್ಕಾರದ ಮುಂದಿಡಲಾಗಿದೆ.
BIGG NEWS: ಚಿಕ್ಕಬಳ್ಳಾಪುರದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಸಚಿವ ಸುಧಾಕರ್ ಭೇಟಿ; ರೈತರಿಗೆ ಪರಿಹಾರ ವಿತರಣೆ
ಸರ್ಕಾರ ದರ ಏರಿಕೆ ಮಾಡದಿದ್ದರೆ ಪ್ರತಿಭಟನೆ ಮಾಡಲು ಹಾಲು ಒಕ್ಕೂಟದವರು ಚಿಂತನೆ ನಡೆಸಿದ್ದಾರೆ. ಬೆಲೆ ಏರಿಕೆ ಮಧ್ಯೆ ಹಾಲು ಉತ್ಪಾದನೆ, ಹೈನುಗಾರಿಕೆ ಕಷ್ಟ ಆಗುತ್ತಿದೆ. ಉಳಿತಾಯ ಮಾಡುವುದಕ್ಕೆ ಸಾಧ್ಯ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹಾಲಿನ ದರ ಏರಿಕೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎನ್ನಲಾಗಿದೆ.
BIGG NEWS: ಚಿಕ್ಕಬಳ್ಳಾಪುರದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಸಚಿವ ಸುಧಾಕರ್ ಭೇಟಿ; ರೈತರಿಗೆ ಪರಿಹಾರ ವಿತರಣೆ
ಕರ್ನಾಟಕದ 14 ಹಾಲು ಒಕ್ಕೂಟಗಳು ಪ್ರತಿ ಲೀಟರ್ಗೆ ₹ 5 ಹೆಚ್ಚಿಸಬೇಕೆಂದು ಮನವಿ ಮಾಡಿದ್ದವು. ಒಮ್ಮೆಲೆ ಇಷ್ಟೊಂದು ಹೆಚ್ಚಿಸಿದರೆ ಗ್ರಾಹಕರಿಗೆ ಹೊರೆಯಾಗಬಹುದು ಎನ್ನುವ ಕಾರಣಕ್ಕೆ ಮೂರು ರೂಪಾಯಿ ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ