ನವದೆಹಲಿ : ನಿನ್ನೆ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯ ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ. ಸದ್ಯಕ್ಕೆ ಅಸ್ತಿತ್ವದಲ್ಲಿರುವ 4 ಜಿಎಸ್‌ಟಿ ಸ್ಲ್ಯಾಬ್ಗಳಲ್ಲಿ ಎರಡನ್ನು ರದ್ದು ಮಾಡಿ ಎರಡೇ ಸ್ಲ್ಯಾಬ್ ಜಾರಿಗೆ ತರಲು ಜಿಎಸ್‌ಟಿ ಮಂಡಳಿ ಅನುಮೋದನೆ ನೀಡಿದೆ. ಹೀಗಾಗಿ, ದಸರಾ ಹಬ್ಬಕ್ಕೂ ಮುನ್ನ ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ.
ಕೇಂದ್ರ ಸರ್ಕಾರವು ಸಲ್ಲಿಸಿದ ಜಿಎಸ್‌ಟಿ ಕಡಿತ ಮತ್ತು ಸುಧಾರಣೆಗಳ ಪ್ರಸ್ತಾವನೆಗಳನ್ನು ಸರ್ವಾನುಮತದಿಂದ ಅನುಮೋದಿಸಿದೆ. ಇದು ಸಾಮಾನ್ಯ ಜನರು, ರೈತರು, ಎಂಎಸ್‌ಎಂಇಗಳು, ಮಧ್ಯಮ ವರ್ಗ, ಮಹಿಳೆಯರು ಮತ್ತು ಯುವಕರಿಗೆ ಪ್ರಯೋಜನವನ್ನು ನೀಡುತ್ತದೆ. 56ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಿದ್ದು, ಮಧ್ಯಮ ವರ್ಗ ಮತ್ತು ಸಾಮಾನ್ಯ ಜನರ ಬಳಕೆಯ ವಸ್ತುಗಳ ಮೇಲಿನ ಜಿಎಸ್‌ಟಿ ದರವನ್ನು ಸಂಪೂರ್ಣವಾಗಿ ಕಡಿಮೆ ಮಾಡಲಾಗಿದೆ.
* ಕೇಶ ತೈಲ (ಹೇರ್ ಆಯಿಲ್)
* ಟಾಯ್ಲೆಟ್ ಸೋಪ್, ಸೋಪ್ ಬಾರ್‌ಗಳು
* ಶಾಂಪೂ
* ಶೇವಿಂಗ್ ಕ್ರೀಮ್
* ಟೂತ್‌ಬ್ರಶ್, ಟೂತ್‌ಪೇಸ್ಟ್
* ಸೈಕಲ್
* ಟೇಬಲ್ ವೇರ್, ಕಿಚನ್ ವೇರ್ ಮತ್ತು ಇತರೆ ಮನೆಯ ಉಪಕರಣಗಳು
* ಬೆಣ್ಣೆ, ತುಪ್ಪ, ಚೀಸ್ ಮತ್ತು ಡೈರಿ ಸ್ಪ್ರೆಡ್‌ಗಳು, ನಾಮ್‌ಕೀನ್‌ಗಳು, ಪಾತ್ರೆಗಳು
*ಫೀಡಿಂಗ್ ಬಾಟಲಿಗಳು, ಶಿಶುಗಳಿಗೆ ನ್ಯಾಪ್‌ಕಿನ್‌ಗಳು ಮತ್ತು ಕ್ಲಿನಿಕಲ್ ಡೈಪರ್‌ಗಳು
* ಹೊಲಿಗೆ ಯಂತ್ರಗಳು
28%ನಿಂದ 18%ಗೆ ಇಳಿದಿರುವ ವಸ್ತುಗಳು
* ಹವಾನಿಯಂತ್ರಣ ಯಂತ್ರಗಳು (ಎಸಿ)
* 32 ಇಂಚುಗಳಿಗಿಂತ ದೊಡ್ಡದಾದ ಟಿವಿಗಳು (ಎಲ್ಲಾ ಟಿವಿಗಳು ಈಗ 18% ಜಿಎಸ್‌ಟಿ ವ್ಯಾಪ್ತಿಗೆ)
* ಡಿಶ್‌ವಾಷಿಂಗ್ ಯಂತ್ರಗಳು
* ಸಣ್ಣ ಕಾರುಗಳು
* 350 ಸಿಸಿ ಅಥವಾ ಅದಕ್ಕಿಂತ ಕಡಿಮೆ ಸಾಮರ್ಥ್ಯದ ಬೈಕ್ಗಳು
* ಬಸ್‌ಗಳು, ಟ್ರಕ್‌ಗಳು, ಆಂಬ್ಯುಲೆನ್ಸ್‌ಗಳು
* ಎಲ್ಲಾ ಆಟೋ ಭಾಗಗಳು
* ತ್ರಿಚಕ್ರ ವಾಹನಗಳು
* ಸಿಮೆಂಟ್
#WATCH | Delhi: After the 56th GST Council meeting, Union Finance Minister Nirmala Sitharaman says, "All this will be effective 22 September 2025, the first day of Navratri… The changes on GST of all products except sin goods, will be applicable 22 September… Sin goods will… pic.twitter.com/duA494ogxK
— ANI (@ANI) September 3, 2025