ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನ ಮಂಡಲದ ಅಧಿವೇಶನದಲ್ಲಿ ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಅಧಿನಿಯಮ 2023 ಅನ್ನು ಮಂಡಿಸಿ ಅಂಗೀಕಾರ ಪಡೆದಿದೆ. ಇದಕ್ಕೆ ರಾಷ್ಟ್ರಪತಿಗಳಿಂದಲೂ ಅಂಗೀಕಾರ ದೊರೆತಿದೆ. ಹೀಗಾಗಿ ಇನ್ಮುಂದೆ ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲರಾದವರ ವ್ಯಾಜ್ಯಗಳು 6 ತಿಂಗಳ ಕಾಲಮಿತಿಯಲ್ಲಿಯೇ ಇತ್ಯರ್ಥವಾಗಲಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ ಅವರು, ದೇಶದ ಯಾವುದೇ ರಾಜ್ಯದಲ್ಲಿಯೂ ಈ ರೀತಿ ಬಡವರ ವ್ಯಾಜ್ಯ ತ್ವರಿತ ಪರಿಹಾರಕ್ಕೆ ಮಸೂದೆಗಳು ಮಂಡನೆಯಾಗಿಲ್ಲ. ಬಡವರು, ಸಣ್ಣ ರೈತರು ಹಣ ಖರ್ಚು ಮಾಡಿಕೊಂಡು ನ್ಯಾಯದಾನ ಪಡೆಯಲು ವರ್ಷಗಟ್ಟಲೆ ನ್ಯಾಯಾಲಯಕ್ಕೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಇದನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.
ದೇಶದ ಯಾವುದೇ ರಾಜ್ಯದಲ್ಲಿಯೂ ಈ ರೀತಿ ಬಡವರ ವ್ಯಾಜ್ಯ ತ್ವರಿತ ಪರಿಹಾರಕ್ಕೆ ಮಸೂದೆಗಳು ಮಂಡನೆಯಾಗಿಲ್ಲ. ಬಡವರು, ಸಣ್ಣ ರೈತರು ಹಣ ಖರ್ಚು ಮಾಡಿಕೊಂಡು ನ್ಯಾಯದಾನ ಪಡೆಯಲು ವರ್ಷಗಟ್ಟಲೆ ನ್ಯಾಯಾಲಯಕ್ಕೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಇದನ್ನು ಜಾರಿಗೆ ತರಲಾಗಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್… pic.twitter.com/Fcit8rm6W1
— DIPR Karnataka (@KarnatakaVarthe) March 4, 2024
ವಿಧಾನಸೌಧದಲ್ಲಿ ‘ಪಾಕಿಸ್ತಾನದ ಪರ’ ಘೋಷಣೆ: ‘FSL ವರದಿ’ ಬಹಿರಂಗಕ್ಕೆ ಆರ್.ಅಶೋಕ್ ಒತ್ತಾಯ
ಬಿಜೆಪಿ ‘Modi ka Parivar’ ಅಭಿಯಾನ ಆರಂಭ : “ಮೋದಿಗೆ ಕುಟುಂಬವಿಲ್ಲ” ಲಾಲು ಹೇಳಿಕೆಗೆ ತಿರುಗೇಟು