ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಹೀಗಾಗಿ ಇನ್ಮುಂದೆ ಆರೋಗ್ಯ ಇಲಾಖೆಯ ವೈದ್ಯರು, ನರ್ಸ್ ಸೇರಿದಂತೆ ಇತರೆ ಸಿಬ್ಬಂದಿಗಳಿಗೆ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವುದು ಕಡ್ಡಾಯಗೊಂಡಂತೆ ಆಗಿದೆ.
ರಾಜ್ಯದ ನಗರ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವಂತ ವೈದ್ಯರು, ನರ್ಸ್ ಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಇನ್ಮುಂದೆ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ. ಇದರ ಸಂಬಂಧ ವಿಧಾನಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಕಾಯ್ದೆ ವಿಧಾನ ಪರಿಷತ್ ನಲ್ಲಿ ಅಂಗೀಕಾರಗೊಂಡಿದೆ.
ಇಂದು ವಿಧಾನ ಪರಿಷತ್ತಿನಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ನಗರ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ವೈದ್ಯರು, ನರ್ಸ್ ಗಳು, ಡಿ ಗ್ರೂಪ್ ಸಿಬ್ಬಂದಿಗಳು ದೀರ್ಘಕಾಲದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಕೆಲಸದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಇವರನ್ನು ವರ್ಗಾವಣೆ ಮಾಡಿದರೇ ನ್ಯಾಯಾಲಯದ ಮೊರೆ ಹೋಗುತ್ತಿದ್ದರು. ಸರ್ಕಾರದ ವರ್ಗಾವಣೆಗೆ ತಡೆಯಾಜ್ಞೆ ತರುತ್ತಿದ್ದರು ಎಂದರು.
ನಗರ ಪ್ರದೇಶದಿಂದ ಗ್ರಾಮೀಣ ಭಾಗಕ್ಕೆ ಆರೋಗ್ಯ ಸೇವೆಗೆ ವೈದ್ಯರು ಸೇರಿದಂತೆ ಇತರೆ ಸಿಬ್ಬಂದಿ ಹೋಗದ ಕಾರಣದಿಂದಾಗಿ ಗ್ರಾಮೀಣ ಭಾಗದಲ್ಲಿ ವೈದ್ಯರು, ಇತರೆ ಸಿಬ್ಬಂದಿಗಳ ಕೊರತೆ ಉಂಟಾಗುತ್ತಿದೆ. ಹೀಗಾಗಿ ಇದನ್ನು ಸರಿ ಪಡಿಸೋ ಸಲುವಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂಬುದಾಗಿ ತಿಳಿಸಿದರು.
ನೂತನ ಕಾಯ್ದೆಯಂತೆ ಹಲವು ವರ್ಷಗಳ ಕಾಲ ಒಂದೇ ಕಡೆ ಕೆಲಸ ಮಾಡುತ್ತಿರುವಂತ ವೈದ್ಯರಿಗೆ ಬಡ್ತಿ ಸಂದರ್ಭದಲ್ಲಿ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಬೇಕಾಗಿದೆ. ಈಗಾಗಲೇ 500 ವೈದ್ಯರು ಹಾಗೂ ಇನ್ನಿತರರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ ಎಂಬುದಾಗಿ ಹೇಳಿದರು.
ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ