Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚೀನಾದ ಪ್ರಚಾರ ಮಾಧ್ಯಮ ಸಂಸ್ಥೆ ‘ಗ್ಲೋಬಲ್ ಟೈಮ್ಸ್’ ನ ‘X’ ಖಾತೆ ಭಾರತದಲ್ಲಿ ನಿಷೇಧ | Global Times X Ban

14/05/2025 11:23 AM

BREAKING : ಭಾರತದಲ್ಲಿ ಚೀನಾದ ಪ್ರಚಾರ ಸಂಸ್ಥೆ ಗ್ಲೋಬಲ್ ಟೈಮ್ಸ್ ನ `X’ ಖಾತೆ ನಿಷೇಧ : ಕೇಂದ್ರ ಸರ್ಕಾರ ಆದೇಶ | Global Times

14/05/2025 11:21 AM

BIG UPDATE : ಪಂಜಾಬ್ ನಲ್ಲಿ ಕಳ್ಳಭಟ್ಟಿ ದುರಂತ : ಮೃತಪಟ್ಟರ ಸಂಖ್ಯೆ 23 ಕ್ಕೆ ಏರಿಕೆ | spurious liquor

14/05/2025 11:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಮುಂದೆ ಮಕ್ಕಳು ಬಾಲ ನಟ, ನಟಿಯಾಗಿ ನಟನಾ ಕೆಲಸ ಮಾಡಲು ಅನುಮತಿ ಕಡ್ಡಾಯ!
KARNATAKA

ಇನ್ಮುಂದೆ ಮಕ್ಕಳು ಬಾಲ ನಟ, ನಟಿಯಾಗಿ ನಟನಾ ಕೆಲಸ ಮಾಡಲು ಅನುಮತಿ ಕಡ್ಡಾಯ!

By kannadanewsnow0724/02/2024 6:16 PM
film screening

ಬೆಂಗಳೂರು: ರಾಜ್ಯದಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ತಿದ್ದುಪಡಿ ಕಾಯ್ದೆ 2016 ರನ್ವಯ ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ನಟ ಹಾಗೂ ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯು ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಹಾಗೂ ಕಾಯ್ದೆಯು 14-18ರ ವಯಸ್ಸಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕಿಶೋರವಸ್ಥೆಯ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ. 

‘ಬ್ರೈನ್ ಸ್ಟ್ರೋಕ್’ಗೆ ಮೊದ್ಲು ಕಾಣಿಸಿಕೊಳ್ಳೊ ಲಕ್ಷಣಗಳಿವು.! ಜಾಗರೂಕರಾಗಿರಿ

ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ಮೊದಲ ಅಪರಾದಕ್ಕೆ ತಪ್ಪಿತಸ್ಥ ಮಾಲೀಕರಿಗೆ 6 ತಿಂಗಳಿನಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ರೂ.20,000 ರಿಂದ ರೂ.50,000 ರವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.

ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಕರ್ನಾಟಕ ನಿಯಮಗಳು ‘2ಸಿ’ ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು (1) ಕಲಂ 3ರ ನಿಬಂಧನೆಗಳನ್ವಯ ಕೆಳಗಿನ ನಿಯಮಗಳಿಗೆ ಒಳಪಟ್ಟಂತೆ ಮಗು ಕಲಾವಿದನಾಗಿ ಕೆಲಸ ಮಾಡಲು ಅನುಮತಿಸಬಹುದಾಗಿದೆ ಅವುಗಳು ಈ ಕೆಳಕಂಡಂತಿವೆ: ಯಾವುದೇ ಮಗುವನ್ನು ಒಂದು ದಿನದಲ್ಲಿ 5 ಗಂಟೆಗಳಿಗಿಂತ ಹೆಚ್ಚಿನ ಅವಧಿಗೆ ನಟನಾ ಕೆಲಸಕ್ಕೆ ನಿಯೋಜಿಸುವಂತಿಲ್ಲ ಮತ್ತು ವಿಶ್ರಾಂತಿ ಇಲ್ಲದೇ 3 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸುವಂತಿಲ್ಲ.

ಶ್ರವಣ ಮತ್ತು ದೃಶ್ಯ ಮಾಧ್ಯಮದ ಯಾವುದೇ ನಿರ್ಮಾಪಕರು ನಿರ್ಮಿಸಿದ ಅಥವಾ ಯಾವುದೇ ವಾಣಿಜ್ಯ ಪರ ಕಾರ್ಯಕ್ರಮದಲ್ಲಿ ಮಗು ಭಾಗವಹಿಸುವುದಿದ್ದರೆ, ಆ ಚಟುವಟಿಕೆ ನಡೆಯುವ ಪ್ರದೇಶದ ಜಿಲ್ಲಾ ದಂಡಾಧಿಕಾರಿಗಳ ಪೂರ್ವಾನುಮತಿ ಪಡೆದು ಭಾಗವಹಿಸುವಂತೆ ಮಾಡುವುದು ಮತ್ತು ಚಟುವಟಿಕೆ ಪ್ರಾರಂಭಿಸುವ ಪೂರ್ವದಲ್ಲಿ ನಮೂನೆ ‘ಸಿ’ ಯಲ್ಲಿ ಜಿಲ್ಲಾ ದಂಡಾಧಿಕಾರಿಗೆ ಮುಚ್ಚಳಿಕೆ ಪತ್ರ ಸಲ್ಲಿಸಬೇಕು. ಭಾಗವಹಿಸುವ ಮಕ್ಕಳ ಪಟ್ಟಿ ಪೆÇೀಷಕರ ಅಥವಾ ಪಾಲಕರ ಒಪ್ಪಿಗೆ ಪತ್ರ ಸಲ್ಲಿಸಬೇಕು ಎಂದು ಡಿಸಿಯವರು ತಿಳಿಸಿದ್ದಾರೆ.

“ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ತುಷ್ಟೀಕರಣ ಮೀರಿ ಯೋಚಿಸೋದಿಲ್ಲ” ಕಾಂಗ್ರೆಸ್ ವಿರುದ್ಧ ‘ಪ್ರಧಾನಿ ಮೋದಿ’ ಕಿಡಿ

ಮಗುವಿನ ಸಂರಕ್ಷತೆಗೆ ಸಂಬಂಧಿಸಿದಂತೆ, ನಿರ್ಮಾಕರ ಅಥವಾ ಸಮಾರಂಭದ ಆಯೋಜಕರ ಹೆಸರುಗಳನ್ನು ಒದಗಿಸಬೇಕು. ಮಕ್ಕಳನ್ನು ಬಳಸಿ ಸಂಪೂರ್ಣ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಮಕ್ಕಳ ದುರುಪಯೋಗ ಪ್ರಕರಣ, ನಿರ್ಲಕ್ಷ್ಯ ಅಥವಾ ಶೋಷಣೆ ನಡೆಯದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರಬೇಕೆಂದು ಚಲನಚಿತ್ರಗಳ ಅಥವಾ ದೂರದರ್ಶನದ ಪ್ರದರ್ಶನದ ಹಕ್ಕು ನಿರಾಕರಣೆಗೆ ಒಳಪಟ್ಟಿದೆ ಎಂಬುದನ್ನು ನಿರ್ಮಾಪಕರಿಗೆ ಖಚಿತ ಪಡಿಸುವುದು.

ಕಲಂ ‘ಬಿ’ ಯಲ್ಲಿ ಉಲ್ಲೇಖಿಸಿರುವ ಮುಚ್ಚಳಿಕೆಯು 6 ತಿಂಗಳುಗಳವರೆಗೆ ಮಾನ್ಯವಾಗಿರುತ್ತದೆ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ಸುರಕ್ಷತೆ ಮತ್ತು ಮಕ್ಕಳ ದುರುಪಯೋಗ ತಡೆ ಕುರಿತಾದ ಮಾನ್ಯತೆ ಪಡೆದ ಮಾರ್ಗಸೂಚಿಗಳು ಮತ್ತು ಇಂತಹ ಉದ್ದೇಶಗಳಿಗಾಗಿ ಸೂಕ್ತ ಸರ್ಕಾರವು ನಿಗಧಿತವಾಗಿ ಹೊರಡಿಸಿರುವ ಸುರಕ್ಷತಾ ನೀತಿಗಳನ್ನು ಆಳವಡಿಸಿಕೊಂಡಿರುವ ಬಗ್ಗೆ ಸ್ಪಷ್ಟವಾಗಿ ತಿಳಿಸಬೇಕು.

ಲೋಕಸಭಾ ಚುನಾವಣೆಗೂ ಮುನ್ನವೇ ಗಿಫ್ಟ್ ಪಾಲಿಟಿಕ್ಸ್: ಮತದಾರರಿಗೆ ಕುಕ್ಕರ್, ಡಿನ್ನರ್ ಸೆಟ್ ಹಂಚಿದ ಕಾಂಗ್ರೆಸ್‌!

ಮಗುವಿನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಖಾತ್ರಿಪಡಿಸಿಕೊಳ್ಳಬೇಕು. ಮಗುವಿಗೆ ಸಕಾಲಿಕ ಪೌಷ್ಠಿಕ ಆಹಾರ ಒದಗಿಸಬೇಕು. ದೈನಂದಿನ ಅಗತ್ಯಗಳಿಗೆ ಸಾಕಾಗುವಷ್ಟು ಸಾಮಾಗ್ರಿಗಳು, ಸ್ವಚ್ಚ ಮತ್ತು ಸುರಕ್ಷಿತವಾದ ಆಶ್ರಯ ಒದಗಿಸುವುದು.ಶಿಕ್ಷಣದ ಹಕ್ಕು ಸಂರಕ್ಷಣೆ, ಲೈಂಗಿಕ ಅಪರಾಧಗಳಿಂದ ರಕ್ಷಣೆ ಒಳಗೊಂಡಂತೆ ಮಕ್ಕಳ ರಕ್ಷಣೆ ಕುರಿತಾಗಿ ಕಾಲ ಕಾಲಕ್ಕೆ ಜಾರಿಯಲ್ಲಿರುವ ಎಲ್ಲಾ ಕಾನೂನುಗಳ ಪಾಲನೆ ಮಾಡಬೇಕು.

ಮಗು ಶಾಲೆಯ ಪಾಠ ಪ್ರವಚನಗಳಿಗೆ ಗೈರಾಗದಂತೆ ಶಿಕ್ಷಣದಲ್ಲಿ ನಿರಂತರವಾಗಿ ಮುಂದುವರೆಯಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದನ್ನು ಖಾತರಿಪಡಿಸಿಕೊಳ್ಳಬೇಕು. ಯಾವುದೇ ಮಗು ನಿರಂತರವಾಗಿ 27 ದಿನಗಳಿಗಿಂತ ಹೆಚ್ಚಿನ ದಿನಗಳು ನಟನಾ ಕೆಲಸದಲ್ಲಿ ತೊಡಗಲು ಅವಕಾಶ ನೀಡಬಾರದು ಎಂದೂ ತಿಳಿಸಿದ್ದಾರೆ.ಮಗುವಿನ ರಕ್ಷಣೆ, ಪೆÇೀಷಣೆ ಮತ್ತು ಹಿತಾಸಕ್ತಿಯನ್ನು ಕಾಪಾಡಲು ನಿರ್ಮಾಣ ಅಥವಾ ಕಾರ್ಯಕ್ರಮದಲ್ಲಿ ತೊಡಗಿರುವ ಪ್ರತಿ 5 ಮಕ್ಕಳಿಗೆ ಒಬ್ಬರಂತೆ ಜವಾಬ್ದಾರಿ ವ್ಯಕ್ತಿಯನ್ನು ನೇಮಿಸಬೇಕು.

ನಿರ್ಮಾಣ ಅಥವಾ ಕಾರ್ಯಕ್ರಮದಿಂದ ಮಗುವಿಗೆ ಬರುವ ಒಟ್ಟು ಆದಾಯದ ಕನಿಷ್ಠ ಶೇ.20 ನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮಗುವಿನ ಹೆಸರಿನಲ್ಲಿ ನಿಶ್ಚಿತ ಠೇವಣಿ ಖಾತೆ ತೆರೆದು ಇಡಬೇಕು. ಅದನ್ನು ಮಗು ಪ್ರಾಯಸ್ಥನಾದಾಗ ಪಡೆಯಲು ಅವಕಾಶ ಕಲ್ಪಿಸಬೇಕು.

ಯಾವುದೇ ಮಗುವಿನ ಒಪ್ಪಿಗೆ ಮತ್ತು ಇಚ್ಚೆಗೆ ವಿರುದ್ಧವಾಗಿ ಯಾವುದೇ ಧ್ವನಿ, ದೃಶ್ಯ ಮತ್ತು ಕ್ರೀಡಾ ಚಟುವಟಿಕೆಗಳ ಅನೌಪಾಚಾರಿಕ ಮನರಂಜನಾ ಚಟುವಟಿಕೆಗಳನ್ನೊಳಗೊಂಡಂತೆ ಭಾಗವಹಿಸುವಂತಿಲ್ಲಾ.

ಮೇಲ್ಕಂಡಂತೆ ಕೇಂದ್ರ ಸರ್ಕಾರದ ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಕರ್ನಾಟಕ ನಿಯಮಗಳು 2ಸಿ ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು (1) ಕಲಂ 3ರ ನಿಬಂಧನೆಗಳ ವಿಷಯದಲ್ಲಿ ಮೇಲ್ಕಂಡ ಪರಿಸ್ಥಿತಿಗಳಿಗೆ / ನಿಯಮಗಳಿಗೆ ಒಳಪಟ್ಟಂತೆ ಮಗುವನ್ನು ಕಲಾವಿದನಾಗಿ ನಟನಾ ಕೆಲಸ ಮಾಡಲು ಅನುಮತಿಸಲಾಗುವುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

From now on it is mandatory for children to be allowed to work as child actors and actresses.
Share. Facebook Twitter LinkedIn WhatsApp Email

Related Posts

‘ಪ್ರಧಾನಿ ಮೋದಿ ಮನೆ ಮೇಲೆ ಯಾಕೆ ಬಾಂಬ್ ದಾಳಿ ನಡೆಸುತ್ತಿಲ್ಲ’ ಎಂದು ವಿಡಿಯೋ ಮಾಡಿದ್ದ ವ್ಯಕ್ತಿ ಬಂಧನ

14/05/2025 11:14 AM1 Min Read

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಪಾರ್ಟಿ ವೇಳೆ ಗಲಾಟೆಯಾಗಿ ವ್ಯಕ್ತಿಯ ಬರ್ಬರ ಹತ್ಯೆ.!

14/05/2025 11:00 AM1 Min Read

BIG NEWS : ನಾಳೆ DCM `ಡಿ.ಕೆ. ಶಿವಕುಮಾರ್’ ಜನ್ಮದಿನ : ಅಭಿಮಾನಿಗಳಿಗೆ ವಿಶೇಷ ಮನವಿ.!

14/05/2025 10:14 AM1 Min Read
Recent News

BREAKING : ಚೀನಾದ ಪ್ರಚಾರ ಮಾಧ್ಯಮ ಸಂಸ್ಥೆ ‘ಗ್ಲೋಬಲ್ ಟೈಮ್ಸ್’ ನ ‘X’ ಖಾತೆ ಭಾರತದಲ್ಲಿ ನಿಷೇಧ | Global Times X Ban

14/05/2025 11:23 AM

BREAKING : ಭಾರತದಲ್ಲಿ ಚೀನಾದ ಪ್ರಚಾರ ಸಂಸ್ಥೆ ಗ್ಲೋಬಲ್ ಟೈಮ್ಸ್ ನ `X’ ಖಾತೆ ನಿಷೇಧ : ಕೇಂದ್ರ ಸರ್ಕಾರ ಆದೇಶ | Global Times

14/05/2025 11:21 AM

BIG UPDATE : ಪಂಜಾಬ್ ನಲ್ಲಿ ಕಳ್ಳಭಟ್ಟಿ ದುರಂತ : ಮೃತಪಟ್ಟರ ಸಂಖ್ಯೆ 23 ಕ್ಕೆ ಏರಿಕೆ | spurious liquor

14/05/2025 11:21 AM

VIRAL NEWS : `ಉಚಿತ ಶೌಚಾಲಯಗಳು, ಉಚಿತ ಲಿಫ್ಟ್‌ಗಳು’ ಎಂಬ ಉದ್ಯೋಗ ಸವಲತ್ತುಗಳನ್ನು ಪಟ್ಟಿ ಮಾಡಿದ ಚೀನೀ ಕಂಪನಿ.!

14/05/2025 11:15 AM
State News
KARNATAKA

‘ಪ್ರಧಾನಿ ಮೋದಿ ಮನೆ ಮೇಲೆ ಯಾಕೆ ಬಾಂಬ್ ದಾಳಿ ನಡೆಸುತ್ತಿಲ್ಲ’ ಎಂದು ವಿಡಿಯೋ ಮಾಡಿದ್ದ ವ್ಯಕ್ತಿ ಬಂಧನ

By kannadanewsnow8914/05/2025 11:14 AM KARNATAKA 1 Min Read

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಬಾಂಬ್ ದಾಳಿ ನಡೆಸುವಂತೆ ಕರೆ ನೀಡಿದ ಪ್ರಚೋದನಕಾರಿ ವಿಡಿಯೋವನ್ನು ಸಾಮಾಜಿಕ…

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಪಾರ್ಟಿ ವೇಳೆ ಗಲಾಟೆಯಾಗಿ ವ್ಯಕ್ತಿಯ ಬರ್ಬರ ಹತ್ಯೆ.!

14/05/2025 11:00 AM

BIG NEWS : ನಾಳೆ DCM `ಡಿ.ಕೆ. ಶಿವಕುಮಾರ್’ ಜನ್ಮದಿನ : ಅಭಿಮಾನಿಗಳಿಗೆ ವಿಶೇಷ ಮನವಿ.!

14/05/2025 10:14 AM

ನಿಮ್ಮಎಲ್ಲಾ ಪಾಪಗಳಿಂದ ಕರ್ಮ ಶಾಪ ಗಳಿಂದ ಮುಕ್ತಿ ಹೊಂದಲು ಒಮ್ಮೆ ಈ ಆತ್ಮಲಿಂಗವನ್ನು ಸ್ಪರ್ಶಿಸಿ ನೋಡಿ ಸರ್ವ ಪಾಪಗಳಿಂದ ಮುಕ್ತರಾಗುತ್ತೀರಿ!

14/05/2025 10:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.