Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಮುಂದೆ CEOಗಳು ವಾರಕ್ಕೊಮ್ಮೆ ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ಕಡ್ಡಾಯ: ರಾಜ್ಯ ಸರ್ಕಾರ
KARNATAKA

ಇನ್ಮುಂದೆ CEOಗಳು ವಾರಕ್ಕೊಮ್ಮೆ ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ಕಡ್ಡಾಯ: ರಾಜ್ಯ ಸರ್ಕಾರ

By kannadanewsnow0703/01/2024 7:05 AM
vidhana soudha
vidhana soudha

ಬೆಂಗಳೂರು: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಾರಕ್ಕೊಮ್ಮೆ ಕಡ್ಡಾಯವಾಗಿ ತಾಲ್ಲೂಕು ಕೇಂದ್ರಗಳಿಗೆ ಹಾಗೂ ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡಬೇಕೆಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಚಿವರು ಇಂದು (2024 ಜನವರಿ 02) ವಿಡಿಯೊ ಸಭೆ ನಡೆಸಿ ಜಿಲ್ಲೆಗಳಲ್ಲಿ ಆಗಿರುವ ಪ್ರಗತಿ ಪರಿಶೀಲಿಸಿ ಸೂಚನೆ, ಸಲಹೆಗಳನ್ನು ನೀಡಿದರು,.

ಗ್ರಾಮೀಣ ಭಾಗದಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವಲ್ಲಿ ಮಹತ್ತರ ಪಾತ್ರವಹಿಸಿರುವ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಯೋಜನೆಗಳ ಆಶಯ ಹಾಗೂ ಅವುಗಳ ಅಗತ್ಯತೆ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಿದ್ದಲ್ಲಿ ಕಾರ್ಯಕ್ರಮಗಳನ್ನು ಮತ್ತಷ್ಟು ಜನಸ್ನೇಹಿಯಾಗಿ ರೂಪಿಸಲು ಅನುಕೂಲವಾಗಬಲ್ಲದು ಎಂದು ಸಚಿವರು ಹೇಳಿದರು.

ಕೆಲವು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸರ್ಕಾರದ ಆದೇಶ ಸೂಚನೆಗಳಿಗೆ ಮಹತ್ತ್ವ ನೀಡದೆ, ತಮ್ಮದೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಸರ್ಕಾರದ ಆದೇಶಗಳನ್ನು ಪಾಲಿಸದೇ ಇರುವ ಅಧಿಕಾರಿಗಳಿಗೆ ನೋಟಿಸು ಜಾರಿ ಮಾಡಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳ ವಿರುದ್ಧ ಇರುವ ಇಲಾಖಾ ತನಿಖೆಗಳು ಹಾಗೂ ಲೋಕಾಯುಕ್ತ ತನಿಖೆಗಳ ಸಂಬಂಧದಲ್ಲಿ ತ್ವರಿತ ಕ್ರಮ ಆಗದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವರು ವಿಳಂಬ ಮಾಡದೆ ಕ್ರಮ ಕೈಗೊಂಡು ಪ್ರಕರಣಗಳಿಗೆ ಅಂತ್ಯ ಹಾಡಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿದರು. 253 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, 130 ಪಂಚಾಯತಿ ಕಾರ್ಯದರ್ಶಿಗಳು ಹಾಗೂ ಇತರ 32 ಸಿಬ್ಬಂದಿ ವಿರುದ್ಧ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಇಲಾಖಾ ತನಿಖೆ ಬಾಕಿಯಿದೆ.

14 ಹಾಗೂ 15ನೆ ಹಣಕಾಸು ಆಯೋಗದ ಅನುದಾನದಲ್ಲಿ ಬಾಕಿ ಇರುವ ಕಾಮಗಾರಿಗಳ ವಿವರಗಳನ್ನು ಪರಿಶೀಲಿಸಿದ ಸಚಿವರು ಕೆಲವು ಜಿಲ್ಲೆಗಳಲ್ಲಿ ಪ್ರಗತಿ ಕುಂಠಿತವಾಗಿರುವುದನ್ನು ಗಮನಿಸಿ ತಕ್ಷಣವೆ ಕಾಮಗಾರಿಗಳನ್ನು ಚುರುಕುಗೊಳಿಸಿ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಸೂಚನೆ ನೀಡಿದರು.

ಸುಸಜ್ಜಿತ ಕಟ್ಟಡಗಳನ್ನು ಹೊಂದಿಲ್ಲದ ಗ್ರಾಮ ಪಂಚಾಯತಿ ಕಚೇರಿಗಳಿಗೆ ಕಟ್ಟಡ ನಿರ್ಮಾಣಕ್ಕಾಗಿ ತಲಾ 20 ಲಕ್ಷ ರೂ. ಅನುದಾನ ನೀಡಲಾಗುತ್ತಿದ್ದು, ಕಟ್ಟಡ ನಿರ್ಮಾಣದ ಪ್ರಗತಿಯನ್ನು ಸಚಿವ ಪ್ರಿಯಾಂಕ್‌ ಖರ್ಗೆ ಪರಿಶೀಲಿಸಿದರು. 283 ಕಟ್ಟಡಗಳು ನಿರ್ಮಾಣಗೊಂಡಿವೆ, 151 ಕಟ್ಟಡಗಳ ನಿರ್ಮಾಣ ವಿವಿಧ ಹಂತಗಳಲ್ಲಿವೆ, 22 ಗ್ರಾಮಗಳಲ್ಲಿ ನಿವೇಶನ ಲಭ್ಯವಾಗಬೇಕಾಗಿದೆ ಎಂದು ಸಚಿವರ ಗಮನಕ್ಕೆ ತರಲಾಯಿತು.

ರಾಜ್ಯದ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ 46655 ಸಿಬ್ಬಂದಿಯಿದ್ದು, ಇಲ್ಲಿಯವರೆವಿಗೂ ಶೇ 63ರಷ್ಟು ಮಂದಿ ಮಾತ್ರ ಇ-ಹಾಜರಿಯನ್ನು ಬಳಸುತ್ತಿರುವುದನ್ನು ಗಮನಿಸಿದ ಸಚಿವರು ಕೂಡಲೇ ನೂರಕ್ಕೆ ನೂರರಷ್ಟು ಸಿಬ್ಬಂದಿಯನ್ನು ಇ ಹಾಜರಾತಿ ತೆಕ್ಕೆಗೆ ತರಲು ಹೇಳಿದರಲ್ಲದೆ, ಈ ವ್ಯವಸ್ಥೆಗೆ ಬಾರದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಲೂವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇ-ಸ್ವತ್ತು ದಾಖಲೆಗಳ ವಿತರಣೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಆಕ್ಷೇಪ ವ್ಯಕ್ತಪಡಿಸಿ ಜನೋಪಯೋಗಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಆದ್ಯತೆ ನೀಡುವಂತೆ ನೌಕರರನ್ನು ಸಜ್ಜುಗೊಳಿಸಲು ನಿರ್ದೇಶನ ನೀಡಿದರು.

ರಾಜ್ಯದಾದ್ಯಂತ 4000 ಕೂಸಿನಮನೆ ಘಟಕಗಳನ್ನು ಆರಂಭಿಸುವ ಉದ್ದೇಶವಿದ್ದು, ಗ್ರಾಮೀಣ ದುಡಿಯುವ ಮಹಿಳೆಯರಿಗೆ ಅನುಕೂಲವಾಗುವ ಈ ಕಾರ್ಯಕ್ರಮವನ್ನು ನರೇಗ ಅಡಿ ಕಾರ್ಯಗತಗೊಳಿಸಲಾಗುತ್ತಿದೆ, ಆದಷ್ಟು ತ್ವರಿತವಾಗಿ ತರಬೇತಿ ಮುಂತಾದ ಪ್ರಕ್ರಿಯೆಗಳನ್ನು ಮುಗಿಸಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಬಾಪೂಜಿ ಸೇವಾಕೇಂದ್ರಗಳಿಂದ ಗ್ರಾಮೀಣ ಜನರಿಗೆ ಸಾಕಷ್ಟು ಪ್ರಯೋಜನ ದೊರೆತಿದ್ದು ಮತ್ತಷ್ಟು ಸೌಲಭ್ಯಗಳು ಈ ಕೇಂದ್ರಗಳಲ್ಲಿ ಲಬ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರಿಗೆ ತಿಳಿಸಲಾಯಿತು.
ಸಭೆಯಲ್ಲಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹೇಶ್ವರನ್‌, ಪ್ರಧಾನ ಕಾರ್ಯದರ್ಶಿ ಅಂಜುಂ ಪರವೇಜ್‌, ಆಯುಕ್ತರಾದ ಪ್ರಿಯಾಂಕಾ ಮೆರಿ ಫ್ರಾನ್ಸಿಸ್‌, ಪಿ.ಪ್ರದೀಪ್‌, ಪವನ್‌ ಕುಮಾರ್‌, ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು. ನರೆಗ ವಿಭಾಗದವರು ಹೊರ ತಂದಿರುವ ವಾರ್ಷಿಕ ದಿನಚರಿಯನ್ನು ಸಚಿವರು ಬಿಡುಗಡೆ ಮಾಡಿದರು.

From now on it will be mandatory for CEOs to visit taluk gram panchayat offices once a week: State govt ಇನ್ಮುಂದೆ CEOಗಳು ವಾರಕ್ಕೊಮ್ಮೆ ತಾಲ್ಲೂಕು ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ಕಡ್ಡಾಯ: ರಾಜ್ಯ ಸರ್ಕಾರ
Share. Facebook Twitter LinkedIn WhatsApp Email

Related Posts

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM1 Min Read

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM1 Min Read

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read
Recent News

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ತನ್ನ ವಾಯುಪ್ರದೇಶ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಪಾಕಿಸ್ತಾನ ಘೋಷಣೆ | India-Pakistan ceasefire

10/05/2025 8:04 PM
State News
KARNATAKA

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

By kannadanewsnow0510/05/2025 9:02 PM KARNATAKA 1 Min Read

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು…

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.