ಬೆಂಗಳೂರು: ರಾಜ್ಯದಲ್ಲಿ ಬಸ್ ಅವಘಡವನ್ನು ತಪ್ಪಿಸುವ ನಿಟ್ಟಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಕ್ರಮ ವಹಿಸಿದ್ದಾರೆ. ಇನ್ಮುಂದೆ ಸ್ಲೀಪರ್ ಬಸ್ ಗಳಲ್ಲಿ 8 ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಖಡಕ್ ಸೂಚನೆ ನೀಡಿದ್ದಾರೆ.
ಇಂದು ಖಾಸಗಿ ಬಸ್ ಮಾಲೀಕರ ಜೊತೆಗೆ ಸಾರಿಗೆ ಸಚಿವ ಸಭೆ ನಡೆಸಿದರು. ಈ ಸಭೆಯಲ್ಲಿ ಕೆಲ ಖಡಕ್ ಸೂಚನೆಗಳನ್ನು ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಖಾಸಗಿ ಬಸ್ ಗಳಲ್ಲಿ ಇನ್ಮುಂದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಸೆಂಟ್ರಲ್ ಇನ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್ ಪೋರ್ಟ್ ನಿಯಮ ಜಾರಿಗೊಳಿಸಲಾಗುತ್ತಿದೆ. ಇನ್ಮುಂದೆ ಸ್ಲೀಪರ್ ಬಸ್ ಗಳಲ್ಲಿ 8 ನಿಯಮಗಳ ಪಾಲನೆ ಕಡ್ಡಾಯವಾಗಿದೆ. ಸ್ಲೀಪರ್ ಬಸ್ ಗಳಲ್ಲಿ ಚಾಲಕರ ಹಿಂಬದಿ ಡೋರ್ ತೆಗೆಯಬೇಕು. ಸ್ಲೀಪರ್ ಬರ್ತ್ ಗಳಲ್ಲಿ ಸ್ಲೈಡರ್ ತೆಗೆಯಬೇಕು ಎಂಬುದಾಗಿ ಸೂಚಿಸಿದ್ದಾರೆ.
ಫೈರ್ ಡಿಟೆಕ್ಷನ್ ಅನ್ನು ತಿಂಗಳೊಳಗೆ ಕಡ್ಡಾಯವಾಗಿ ಅಳವಡಿಸಬೇಕು. 10 ಕೆಜಿ ತೋಕದ ಅಗ್ನಿಶಾಮಕ ಸಾಧನ ಅಳವಡಿಸುವುದು ಕಡ್ಡಾಯವಾಗಿದೆ. ಚಾಸಿಸ್ ಅನಧಿಕೃತ ವಿಸ್ತರಣೆಗೆ ಬ್ರೇಕ್ ಹಾಕಲಾಗಿದೆ. ಅನುಮೋದಿತ ಟೆಸ್ಟಿಂಗ್ ಏಜೆನ್ಸಿಯಿಂದ ಪ್ರಮಾಣ ಪತ್ರ ಕಡ್ಡಾಯವಾಗಿದೆ. ಪ್ರಯಾಣಿಕರ ಸೇಫ್ಟಿ ಮಾನದಂಡ ಇದ್ದರೆ ಮಾತ್ರ ಎಫ್ ಸಿ ಮಾಡಬೇಕು ಎಂಬುದಾಗಿ ತಿಳಿಸಿದ್ದಾರೆ.
ಬಸ್ ಕವಚ ನಿರ್ಮಾಣ ಸಂಸ್ಥೆ ಸಿಂಧುತ್ವ ಪರಿಶೀಲಿಸಿದ ಬಳಿಕವೇ ನೋಂದಣಿ ಎಂಬುದಾಗಿ ಖಾಸಗಿ ಬಸ್ ಮಾಲೀಕರ ಜೊತೆಗಿನ ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಸೂಚನೆ ನೀಡಿದ್ದಾರೆ.
BREAKING: ರಾಜ್ಯದಲ್ಲಿ ವಾಹನಗಳ FC, ಸಾಗರೇತರ ನೋಂದಣಿ ನವೀಕರಣಕ್ಕೆ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ








