ಬೆಂಗಳೂರು: ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡುತ್ತೇನೆ. ಬಿಆರ್ ಪಾಟೀಲ್, ಬಾಲಕೃಷ್ಣ ಯಾರೇ ಆಗಲಿ ಇನ್ಮುಂದೆ ಮಾಧ್ಯಮಗಳ ಮುಂದೆ ಹೋಗಬಾರದು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕೈ ಬಲಪಡಿಸ್ತೀವಿ. ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡುತ್ತೇನೆ. ಬಿಆರ್ ಪಾಟೀಲ್, ಬಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಪಕ್ಷದ ಯಾರೊಬ್ಬರು ಮಾಧ್ಯಮಗಳ ಮುಂದೆ ಹೋಗಬಾರದು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.
ಮತ್ತೊಂದೆಡೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮಾತನಾಡಿ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಅಭಿಪ್ರಾಯ ಸಂಗ್ರಹ ಮಾಡಿಲ್ಲ. ಪಕ್ಷದ ಶಾಸಕರ ರಿಪೋರ್ಟ್ ಕಾರ್ಡ್ ಪಡೆಯುತ್ತಿದ್ದೇನೆ. 2 ವರ್ಷದಿಂದ ಕ್ಷೇತ್ರದಲ್ಲಿ ಏನು ಕೆಲಸ ಮಾಡಿದ್ದಾರೆಂಬ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಕಮಿಟಿ, ಅಸೆಂಬ್ಲಿ ಕಮಿಟಿಯ ಸಂಘಟನೆ ಹೇಗಿದೆ ಎಂಬುದಾಗಿಯೂ ವಿವರ ಪಡೆಯುತ್ತಿದ್ದೇನೆ. ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆ, ಬೇಡಿಕೆಗಳ ಬಗ್ಗೆಯೂ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಮುಂಚೂಣಿ ಘಟಕಗಳ ಕಾರ್ಯದ ಬಗ್ಗೆಯೂ ಮಾಹಿತಿ ಪಡೆಯುತ್ತಿದ್ದೇನೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಕೂಲತೆ ಬಗ್ಗೆ ಮಾಹಿತಿ, ಜನರ ಬದುಕು ಹೇಗೆ ಬದಲಾಯಿಸುತ್ತಿದೆ ಎಂಬ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದರು.
ಶಿವಮೊಗ್ಗ: ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ರುದ್ರಾಕ್ಷಿ ಗಿಡ ನೆಟ್ಟು ‘ವೈದ್ಯರ ದಿನ’ ಆಚರಣೆ