ರಾಮನಗರ : ನಗರಸಭೆ ವ್ಯಾಪ್ತಿಯಲ್ಲಿನ ಎಲ್ಲಾ ಉದ್ದಿಮೆದಾರರು ರಾಜ್ಯ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024ರ ರೀತ್ಯಾ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಣೆಯಾದ ಅಧಿಸೂಚನೆಯಲ್ಲಿ ವಾಣಿಜ್ಯ/ಕೈಗಾರಿಕೆ ಹಾಗೂ ವ್ಯವಹಾರ ಉದ್ಯಮಗಳು, ಟ್ರಸ್ಟ್ಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್ ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ. 60 ರಷ್ಟು ಮತ್ತು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿಸಬೇಕಿರುತ್ತದೆ.
ಹಾಗಾಗಿಈ ಪ್ರಕಟಣೆಯಾದ 7 ದಿನಗಳೊಳಗಾಗಿ, ತಮ್ಮ ನಾಮಫಲಕದಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸಬೇಕು ಹಾಗೂ ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿಸಲು ಕ್ರಮ ವಹಿಸಬೇಕು ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ರಾಮನಗರ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.