ಬೆಂಗಳೂರು : ಇನ್ಮುಂದೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.33ರಷ್ಟು ಅಂಕ ಪಡೆದರೂ ಪಾಸ್ ಎಂಬುದಾಗಿ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
ಇನ್ಮುಂದೆ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು. ಕನಿಷ್ಠ 30 ಅಂಕ ಪಡೆಯುವುದು ಕಡ್ಡಾಯವಾಗಿದೆ ಲಿಖಿತ ಹಾಗೂ ಆಂತರಿಕ ಅಂಕ ಸೇರಿದಂತೆ 30 ಅಂಕ ಪಡೆದು 198 ಅಂಕ ಪಡೆದರೆ ಪಾಸ್ ಆಗಲಿದ್ದಾರೆ.
2025 ಮತ್ತು 26ನೇ ಸಾಲಿನಿಂದ ಪರೀಕ್ಷಾ ಪಾಸಿಂಗ್ ಅಂಕ ಕಡಿತ ಅಗಲಿದ್ದು, ಅದೇ ರೀತಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ. ಕೂಡ 625ಕ್ಕೆ ಕನಿಷ್ಠ 26 ಅಂಕ ಗಳಿಸಿದರೆ ವಿದ್ಯಾರ್ಥಿಗಳು ಪಾಸ್ ಆದಂತೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ವಿದ್ಯಾರ್ಥಿಗಳು ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 30 ಅಂಕಗಳನ್ನು ಪಡೆಯಬೇಕು. ಪಾಸಿಂಗ್ ಮಾರ್ಕ್ಸ್ ಕಡಿತ ವಿಚಾರವಾಗಿ ಪಬ್ಲಿಕ್ ಅಭಿಪ್ರಾಯ ಹಾಕಿದ್ದೆವು. ಶೇಕಡ 33 ರಷ್ಟು ಪರವಾಗಿ 701 ಪತ್ರಗಳು ಬಂದಿದ್ದವು. ಶೇಕಡ 35ರಷ್ಟು ಪರವಾಗಿ 8 ಪತ್ರಗಳು ಬಂದಿದ್ದವು. ಹೀಗಾಗಿ 2025 ಮತ್ತು 26 ನೇ ಸಾಲಿನಿಂದ 33% ಜಾರಿಗೆ ತರುತ್ತಿದ್ದೇವೆ. 2025 ಮತ್ತು 26ನೇ ಸಾಲಿನಿಂದ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 33% ರಷ್ಟು ಅಂಕ ಪಡೆದರೆ ಪಾಸ್ ಎಂದು ಮಧು ಬಂಗಾರಪ್ಪ ತಿಳಿಸಿದರು.
![ವಿಡಿಯೊ: ಮಲ್ಲಿಗೆ ಮುಡಿದು, ತೆಳು ನೀಲಿ ಸೀರೆಯಲ್ಲಿ ವಿಜಯ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಬಂದ ತ್ರಿಶಾ ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-300x169.jpg)







