ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್.5ರಿಂದ ಸಾರಿಗೆ ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರವನ್ನು ಕೈಗೊಂಡಿದ್ದಾರೆ.
ಈ ಬಗ್ಗೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ. ಕರ್ನಾಟಕದಲ್ಲಿನ ಸಾರಿಗೆ ಸಿಬ್ಬಂದಿಗಳ ಸೇವಾ ಭದ್ರತೆ, ಸರ್ಕಾರಿ ನೌಕರರು ಎಂಬುದಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಈ ಮುಷ್ಕರ ನಡೆಸಲಾಗುತ್ತಿದೆ ಎಂದಿದೆ.
ಸಾರಿಗೆ ನಿಗಮಗಳ ಸಿಬ್ಬಂದಿಗಳು ಈ ಹಿಂದೆಯೂ ಮುಷ್ಕರ ನಡೆಸಿದ್ದರು. ಆ ಸಂದರ್ಭದಲ್ಲಿ ನೌಕರರ ಕೆಲ ಬೇಡಿಕೆಗಳನ್ನು ಸರ್ಕಾರ ಈಡೇರಿಸಿತ್ತು. ಇನ್ನೂ ಕೆಲ ಬೇಡಿಕೆಗಳನ್ನು ಈಡೇರಿಸುವುದು ಬಾಕಿ ಉಳಿದಿದೆ. ಹೀಗಾಗಿ ಮತ್ತೆ ಸಾರಿಗೆ ಸಿಬ್ಬಂದಿಗಳು ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ನಿರ್ಧಾರ ಕೈಗೊಂಡಿದ್ದಾರೆ.
BREAKING: ಡಮಾಸ್ಕಸ್‌ನಲ್ಲಿರುವ ಸಿರಿಯನ್ ಸೇನಾ ಪ್ರಧಾನ ಕಚೇರಿಯ ಮೇಲೆ ಇಸ್ರೇಲಿ ದಾಳಿ | Israeli Strike
GOOD NEWS: ಹೊಸದಾಗಿ ನೇಮಕಗೊಂಡ ‘ಪೌರಕಾರ್ಮಿಕ’ರಿಗೆ ಬಿಬಿಎಂಪಿ ಗುಡ್ ನ್ಯೂಸ್