ಬೆಂಗಳೂರು: ನಾಳೆಯಿಂದ ಆಶಾ ಕಾರ್ಯಕರ್ತೆಯರು ಆಹೋರಾತ್ರಿ ಧರಣಿ, ಸತ್ಯಾಗ್ರಹವನ್ನು ನಡೆಸಲಿದ್ದಾರೆ. ಹೀಗಾಗಿ ರಾಜ್ಯಾಧ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಹಿನ್ನಲೆಯಲ್ಲಿ ಅಗತ್ಯ ತುರ್ತು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ದಿನಾಂಕ: 12.08.2025 ರಿಂದ ದಿನಾಂಕ:14.08.2025 ರವರೆಗೆ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಧರಣಿಗೆ ಕರೆ ನೀಡಿರುತ್ತಾರೆ ಎಂದಿದ್ದಾರೆ.
ಈ ಸಂಬಂಧ ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತರಾಗಿದ್ದು, ಸಮುದಾಯದಲ್ಲಿ ಸಾರ್ವಜನಿಕರು ಆರೋಗ್ಯ ಸೇವೆಗಳನ್ನು ಪಡೆಯಲು ಸಹಕಾರ ನೀಡುವುದು ಇವರ ಪ್ರಾಥಮಿಕ ಜವಾಬ್ದಾರಿಯಾಗಿರುತ್ತದೆ.
ಸ್ವಯಂ ಸೇವಾ ಮನೋಭಾವ ಹೊಂದಿರುವ ಹಾಗೂ ನಿರ್ದಿಷ್ಟ ಮಾನದಂಡ ಪೂರೈಸುವ ಮಹಿಳೆಯರನ್ನು ಗ್ರಾಮ ಸಭೆಯಲ್ಲಿ ಸ್ಥಳೀಯರ ಅಭಿಪ್ರಾಯ ಪಡೆದು ಆಯ್ಕೆ ಮಾಡಲಾಗಿರುತ್ತದೆ. ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಕುಟುಂಬದ ಜವಾಬ್ದಾರಿಯೊಂದಿಗೆ ಇಲಾಖೆಯ ಆರೋಗ್ಯ ಸಿಬ್ಬಂದಿಗಳ ಸಮನ್ವಯದೊಂದಿಗೆ ಸ್ಥಳೀಯ ಸಮುದಾಯಕ್ಕೆ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಯನ್ನು ನಿಗದಿತ ಸಮಯದಲ್ಲಿ ಪಡೆಯಲು ನೆರವಾಗುವುದು ಆಶಾ ಕಾರ್ಯಕರ್ತೆಯರ ಪುಮುಖ ಜವಾಬ್ದಾರಿಯಾಗಿರುತ್ತದೆ.
ಆಶಾ ಕಾರ್ಯಕರ್ತೆಯರಿಗೆ ಕೆಳಕಂಡ ಸೌಲಭ್ಯಗಳನ್ನು ನೀಡಲಾಗುತ್ತಿದೆ.
• ರಾಜ್ಯ ಸರ್ಕಾರದ ವತಿಯಿಂದ ಮಾಸಿಕ ಗೌರವಧನ ರೂ.5000/- ಗಳನ್ನು ನೀಡಲಾಗುತ್ತಿದೆ. • ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಎಂಟು ಆವರ್ತಕ ಮತ್ತು ನಿಯಮಿತ ಚಟುವಟಿಕೆಗಳಿಗೆ ಮಾಸಿಕ ಪ್ರೋತ್ಸಾಹಧನ ರೂ.2000/-ಗಳನ್ನು ನೀಡಲಾಗುತ್ತಿದೆ
• ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ.1000/-ಗಳ ಟೀಮ್ ಬೇಸ್ ಇನ್ಸೆಂಟಿವ್.
• 34 ಆರೋಗ್ಯ ಚಟುವಟಿಕೆಗಳ ಕಾರ್ಯಕ್ರಮ ಅನುಷ್ಠಾನದ ಆಧಾರದ ಪ್ರೋತ್ಸಾಹಧನ. ಪಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ (PMJJBY) ಮತ್ತು ಪುಧಾನ ಮಂತ್ರಿ ಸುರಕ್ಷಾ ಯೋಜನೆ (PMSBY) ಯಡಿಯಲ್ಲಿ ತಲಾ ಎರಡು ಲಕ್ಷಗಳ ರೂಪಾಯಿಗಳ ವಿಮಾ ಸೌಲಭ್ಯವನ್ನು ನೀಡಿ ಸಾಮಾಜಿಕ ಸುರಕ್ಷೆಯನ್ನು ನೀಡುತ್ತಿದ್ದು, ಈ ಯೋಜನೆಗಳ ವಾರ್ಷಿಕ ವಿಮಾ ಅನುದಾನದಿಂದ ಮೊತ್ತವನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ಭರಿಸಲಾಗುತ್ತಿದೆ.
• ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಯೋಜನೆಯ ವೈದ್ಯಕೀಯ ವಿಮಾ ಸೌಲಭ್ಯವನ್ನು ಕೂಡ ಕಲ್ಪಿಸಲಾಗಿದೆ.
• ಆಶಾ ಕಾರ್ಯಕರ್ತೆಯರು, ಇಲಾಖೆಯ ಇತರ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರೊಂದಿಗೆ ಆರೋಗ್ಯ ಸೇವೆಗೆ ಸಂಬಂಧಿಸಿದ ಮಾಹಿತಿ ವಿನಿಮಯಕ್ಕಾಗಿ ಸಿಯುಜಿ ಸಿಮ್ಗಳ ಸೌಲಭ್ಯವನ್ನು ಕಲ್ಪಿಸುವ ಅವಕಾಶವಿರುತ್ತದೆ.
• ಆಶಾ ಕಾರ್ಯಕರ್ತೆಯರು, ಆರೋಗ್ಯ ಚಟುವಟಿಕೆಗಳನ್ನು ಸ್ಮಾರ್ಟ್ ಫೋನ್ ಬಳಸಿ ದಾಖಲಿಸಲು ಮಾಸಿಕ ರೂ.280/- ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ.
• ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಆಶಾ ಕಾರ್ಯಕರ್ತೆಯರ ಕುಂದುಕೊರತೆ ನಿವಾರಣಾ ಸಭೆಯನ್ನು ಆಯೋಜಿಸಿ ಕುಂದುಕೊರತೆಗಳ ಶೀಘ್ರ ನಿವಾರಣೆಗೆ ಅಗತ್ಯ ಕ್ರಮ ವಹಿಸಲಾಗಿದೆ.
ಆಶಾ ಕಾರ್ಯಕರ್ತೆಯರಿಗೆ ಭಾರತ ಸರ್ಕಾರದಿಂದ ನೀಡಲಾಗುವ ಎಂಟು ಆವರ್ತಕ ಮತ್ತು ನಿಯಮಿತ ಚಟುವಟಿಕೆಗಳಿಗೆ ಮಾಸಿಕ ಪ್ರೋತ್ಸಾಹಧನ ರೂ.2000/-ಗಳನ್ನು ರೂ.3500/- ಗಳಿಗೆ ಏರಿಕೆ ಮಾಡುವ ಮತ್ತು 60 ವರ್ಷ ಪೂರೈಸಿ ಸೇವೆಯಿಂದ ನಿವೃತ್ತರಾಗುವ ಆಶಾ ಕಾರ್ಯಕರ್ತೆಯರಿಗೆ ರೂ.50,000/-ಗಳ Golden Handshake ಪ್ರೋತ್ಸಾಹಧನವನ್ನು ನೀಡಲು ರಾಷ್ಟ್ರೀಯ ಆರೋಗ್ಯ ಅಭಿಯಾನದ Mission Steering group ಅನುಮೋದನೆ ನೀಡಿದ್ದು, ಈ ಸಂಬಂಧ ಪ್ರಸ್ತಾವನೆಯನ್ನು ಸಲ್ಲಿಸಲು ಭಾರತ ಸರ್ಕಾರವು ಸೂಚಿಸಿರುತ್ತದೆ.
ದಿನಾಂಕ: 07.08.2025 ರಂದು ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ರವರ ಅಧ್ಯಕ್ಷತೆಯಲ್ಲಿ ವಿಡಿಯೋ ಸಂವಾದದ ಮುಖೇನ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರವು ವಹಿಸಿರುವ ಕ್ರಮಗಳ ಬಗ್ಗೆ ಮನವರಿಕ ಮಾಡಲಾಗಿದ್ದು ಮತ್ತು ಸೃಷ್ಟಿಕರಣಗಳನ್ನು ನೀಡಲಾಗಿರುತ್ತದೆ ಮತ್ತು ಅಹೋರಾತ್ರಿ ಧರಣಿಯನ್ನು ಹಿಂಪಡೆಯುವ ಬಗ್ಗೆ ಮನವಿ ಮಾಡಲಾಗಿರುತ್ತದೆ.
ಆದ್ಯಾಗ್ಯೂ, ಆಶಾ ಕಾರ್ಯಕರ್ತೆಯರು ಉದ್ದೇಶಿತ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದ್ದಲ್ಲಿ ಆರೋಗ್ಯ ಸೇವೆಗಳು ಅಗತ್ಯ ಸೇವೆಯಾಗಿರುವುದರಿಂದ ಸಾರ್ವಜನಿಕರಿಗೆ ಆರೋಗ್ಯ ಸೇವೆಗಳ ಪೂರೈಕೆಯಲ್ಲಿ ಮತ್ತು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಯಾವುದೇ ರೀತಿಯ ತೊಡಕುಗಳಾಗದಂತೆ ನಿಯಮಾನುಸಾರ ಕ್ರಮ ವಹಿಸುವುದು ಅತ್ಯಾವಶ್ಯಕವಾಗಿರುತ್ತದೆ. ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ
ಕಲ್ಯಾಣ ಅಧಿಕಾರಿಗಳು ಕೆಳಕಂಡ ಕ್ರಮಗಳನ್ನು ವಹಿಸಲು ತಿಳಿಸಿದೆ.
ದಿನಾಂಕ 12-08-2025 ರಿಂದ ದ 14-08-2025ರವರೆಗೆ ಉದ್ದೇಶಿತ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಯಿಂದ ಸಾರ್ವಜನಿಕ ಆರೋಗ್ಯ ಸೇವೆಗಳು ವ್ಯತ್ಯಯವಾಗದಂತೆ ಅಗತ್ಯ ಕ್ರಮ ವಹಿಸುವ ಕುರಿತ ಸುತ್ತೋಲೆ.@CMofKarnataka @KarnatakaVarthe pic.twitter.com/zxMktuYzU9
— Karnataka Health Department (@DHFWKA) August 11, 2025
ದೇಶಾದ್ಯಂತ 49,000 ಸಸಿ ನೆಡುವ ಮೂಲಕ 49ನೇ ವರ್ಷಾಚರಣೆ ಮಾಡಿದ ‘HCL ಟೆಕ್’
ರಾಜ್ಯದಲ್ಲಿನ ಅಕ್ರಮ ಬಡಾವಣೆ ನಿರ್ದಾಕ್ಷಿಣ್ಯವಾಗಿ ತೆರವು: ಸಚಿವ ಬಿಎಸ್ ಸುರೇಶ್