ಧಾರವಾಡ : 10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟ ವೆಂದು ಪರಿಗಣಿಸಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ ನಾಲ್ಕು ವಾರ ಕಾಲಾವಕಾಶ ಕೋರಿತು. ಮಧ್ಯಂತರ ಆದೇಶ ಅರ್ಜಿದಾರರಿಗೆ ಸೀಮಿತಗೊಳಿಸಲು ಎಜಿ ಮನವಿ ಮಾಡಿದರು.
ಹುಬ್ಬಳ್ಳಿಯ ಪುನಶ್ಚೇತನ ಸೇವಾ ಸಂಸ್ಥೆ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಆದೇಶ ನಾಗರೀಕರ ಮೂಲಭೂತ ಹಕ್ಕಿನ ಉಲ್ಲಂಘನೆ ಆಗಿದೆ. ಹೀಗಾಗಿ ಮಧ್ಯಂತರ ಆದೇಶ ಅರ್ಜಿದಾರರಿಗೆ ಸೀಮಿತಗೊಳಿಸಲು ಸಾಧ್ಯವಿಲ್ಲ. ಕಾನೂನಿನಿಂದಲ್ಲದೆ ಸರ್ಕಾರಿ ಆದೇಶದಿಂದ ಮೂಲಭೂತ ಹಕ್ಕು ನಿರ್ಭಂಧಿಸುವಂತಿಲ್ಲ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿತು.








