ಬೆಂಗಳೂರು : ವಿಧಾನಸಭೆ ಚುನಾವಣೆ ಬೆನ್ನಲ್ಲೇ ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗಳಿಗೆ ಚುನಾವಣಾ ಘೋಷಣೆಗೆ ಆಯೋಗ ಸಿದ್ದತೆ ನಡೆಸಿದೆ.
ಮತದಾರರ ಪಟ್ಟಿ ಸಿದ್ದತೆ, ಮತದಾನ ಕೇಂದ್ರಗಳ ಸ್ಥಾಪನೆ ಸಂಬಂಧ ಕಾರ್ಯಪ್ರವೃತ್ತರಾಗುವಂತೆ ರಾಜ್ಯ ಚುನಾವಣಾ ಆಯೋಗದಿಂದ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್ ಗೆ ಸೂಚನೆ ನೀಡಲಾಗಿದೆ.
ಭಾರತ ಸಂವಿಧಾನದ ಅನುಚ್ಛೇದ 243ಕೆ ರನ್ವಯ ಪಂಚಾಯತಿಗಳಿಗೆ ನಡೆಯುವ ಎಲ್ಲಾ ಚುನಾವಣೆಗಳಿಗೆ ಸಂಬಂಧಪಟ್ಟಂತ ಮತದಾರರ ಪಟ್ಟಿಗಳ ತಯಾರಿಕೆ ಮತ್ತು ಆ ಎಲ್ಲಾ ಚುನಾವಣೆಗಳ ನಿರ್ವಹಣೆಯ ಅಧೀಕ್ಷಣೆ, ನಿರ್ದೇಶನ ಮತ್ತು ನಿಯಂತ್ರಣ ಇವುಗಳ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗಕ್ಕೆ ನೀಡಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308 ರಲ್ಲಿ ಗ್ರಾಮ, ತಾಲ್ಲೂಕ ಮತ್ತು ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ಮತದಾರರ ಪಟ್ಟಿಯ ಸಿದ್ಧತೆಯ ಮೇಲ್ವಿಚಾರಣೆ, ನಿರ್ದೇಶನ ಮತ್ತು ನಿಯಂತ್ರಣದ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ನೀಡಲಾಗಿದೆ. ಸದರಿ ಅಧಿಕಾರಗಳ ಮೇರೆಗೆ ರಾಜ್ಯ ಚುನಾವಣಾ ಆಯೋಗವು ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ- 2023ಕ್ಕೆ ಸಂಬಂಧಿಸಿದಂತೆ ಕ್ಷೇತ್ರವಾರು ಮತದಾರರ ಪಟ್ಟಿಯನ್ನು ತಯಾರಿಸಲು ಈ ಕೆಳಕಂಡ ಸೂಚನೆಗಳನ್ನು ನೀಡಿದೆ.
ಮತದಾರರ ಪಟ್ಟಿಯನ್ನು ತಯಾರಿಸುವ ಅಧಿಕಾರಿ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪುಕರಣ 165ರ ಪುಕಾರ ಜಿಲ್ಲಾ ಪಂಚಾಯತ್ ಮತದಾರರ ಪಟ್ಟಿಯನ್ನು ಸಂಬಂಧಪಟ್ಟ ಉಪ ವಿಭಾಗಾಧಿಕಾರಿಗಳು ಸಿದ್ಧಪಡಿಸಬೇಕಾಗಿರುತ್ತದೆ. ಪುಕರಣ 126(3)ರ ಪುಕಾರ ಸಂಬಂಧಪಟ್ಟ ತಾಲ್ಲೂಕು ತಹಸೀಲ್ದಾರರು ತಾಲ್ಲೂಕು ಪಂಚಾಯತಿ ಚುನಾವಣಾ ಕ್ಷೇತ್ರಕ್ಕೆ ಮತದಾರರ ಪಟ್ಟಿಯನ್ನು ತಯಾರಿಸುವ ಅಧಿಕಾರಿಯಾಗಿರುತ್ತಾರೆ. ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಯು ಏಕಕಾಲದಲ್ಲಿ ನಡೆಯುವುದರಿಂದ ಹಾಗೂ ಒಂದೇ ಮತದಾರರ ಪಟ್ಟಿಯನ್ನು ಉಪಯೋಗಿಸುವುದರಿಂದ, ಮತದಾರರ ಪಟ್ಟಿಯು ಸಂಬಂಧಪಟ್ಟ ಉಪ ವಿಭಾಗಾಧಿಕಾರಿಗಳ ಹಾಗೂ ತಾಲ್ಲೂಕು ತಹಸೀಲ್ದಾರರ ಸಹಿ ಪದನಾಮ ಒಳಗೊಂಡಿರತಕ್ಕದ್ದು,
ಮತದಾರರ ಪಟ್ಟಿಯ ರೂಪರೇಖೆ: ಪುಕರಣ 126ರ ಪುಕಾರ ತಾಲ್ಲೂಕು ಪಂಚಾಯತಿಯಕ್ಷೇತ್ರವೊಂದರ ಮತದಾರರ ಪಟ್ಟಿಯು ತತ್ಕಾಲದಲ್ಲಿ ಜಾರಿಯಲ್ಲಿರುವ ಜಿಲ್ಲಾ ಪಂಚಾಯತಿ ಮತದಾರರ ಪಟ್ಟಿಯ ಭಾಗವಾಗಿರುತ್ತದೆ. ಸದರಿ ಅಧಿನಿಯಮದ ಪ್ರಕರಣ 165ರ ಪುಕಾರ ಜಿಲ್ಲಾ ಪಂಚಾಯತಿ ಚುನಾವಣಾ ಕ್ಷೇತ್ರದ ಮತದಾರರ ಪಟ್ಟಿಯನ್ನು ತತ್ಕಾಲದಲ್ಲಿ ಜಾರಿಯಲ್ಲಿರುವ ವಿಧಾನಸಭೆಯ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ಜಿಲ್ಲಾ ಪಂಚಾಯತಿ ಮತದಾರರ ಪಟ್ಟಿಯನ್ನು ತಯಾರಿಸಿಕೊಳ್ಳಬೇಕಾಗಿದೆ ಎಂದು ಸೂಚನೆ ನೀಡಿದೆ.
ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ಕೂಡ ವಿದ್ಯುತ್ ವ್ಯತ್ಯಯ |Power Cut