ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರನ್ನು ನೇಮಕ ಮಾಡಿ ಆದೇಶಿಸಿದೆ.

ಈ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿನಿಯಮ, 1995ರ ಪರಿಚ್ಛೇದ 3(2)(ಎ) ಮತ್ತು 4(1)ರ ಅಡಿಯಲ್ಲಿ ಪುದತ್ತವಾದ ಅಧಿಕಾರದನ್ವಯ ಸರ್ಕಾರವು ಗದಿಗೆಪ್ಪ ಸಣ್ಣ ಬಸಪ್ಪ ಸಂಗ್ರೇಶಿ, ಪ್ರಸ್ತುತ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಕರ್ನಾಟಕ ಸರ್ಕಾರ, ವಸತಿ ಗೃಹ ಸಂಖ್ಯೆ:ಬಿ-4, ಜಯಮಹಲ್ ಬಡಾವಣೆ, ಬೆಂಗಳೂರು ಇವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಕಾರ್ಯಭಾರ ವಹಿಸಿಕೊಂಡ ದಿನಾಂಕದಿಂದ 03 ವರ್ಷಗಳ ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಇವರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಿಸಿ ಆದೇಶಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ, ರಾಜೀನಾಮೆ ನೀಡುವವರೆಗೂ ಹೋರಾಟ: ಆರ್‌.ಅಶೋಕ್

Share.
Exit mobile version