ಗದಗ : ಜಿಲ್ಲೆಯ ಲಕ್ಷ್ಮೇಶ್ವರದ ಹಳ್ಳದ ಕೆರೆ ಬಡಾವಣೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮನೆ ಒಂದು ಹೊತ್ತಿ ಉರಿದಿದ್ದು ಮನೆಯಲ್ಲಿದ್ದ ಫ್ಯಾನ್ ಈ ಘಟನೆ ನಡೆದಿದ್ದು,ಕುರ್ಚಿ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಗಿವೆ.
ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಮನೆಯೊಂದು ಹೊತ್ತಿ ಉರಿದಿದ್ದು, ದಾನಪ್ಪ ಹುಲಕೋಟಿ ಎಂಬುವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಫ್ಯಾನ್ ಚೇರ್ ಸೇರಿದಂತೆ ಮನೆಯಲ್ಲಿದ್ದ ಎಲ್ಲ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿಯವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.