ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಕೊಲೆ ಮಾಡಿರುವ ಘಟನೆ ಗದಗದ ನಗರದ ದಾಸರ ಓಣಿಯಲ್ಲಿ ನಡೆದಿದೆ.

ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದ ದುರ್ದೈವಿಗಳಾಗಿದ್ದಾರೆ.

ಸುದ್ದಿ ತಿಳಿದು ಶ್ವಾನದಳದೊಂದಿಗೆ ಘಟನಾ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸರು ಇಂಚಿಂಚು ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಚ್ಚುವರಿ ಪೊಲೀಸ್​ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಬೀಡುಬಿಟ್ಟಿದ್ದು, ತನಿಖೆ ನಡೆಸುತ್ತಿದ್ದಾರೆ.

Share.
Exit mobile version