ಗದಗ: ಮೋಹರಂ ಹಬ್ಬ ಆಚರಣೆಯ ಸಂದರ್ಭದಲ್ಲಿ ಕಾಲು ತುಳಿದ ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರಿಗೆ ಚಾಕುವಿನಿಂದ ಇರಿದಿರುವ ಘಟನೆ, ಗದಗ ಜಿಲ್ಲೆಯಲ್ಲಿ ನಡೆದಿದೆ.
ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಮೋಹರಂ ಹಬ್ಬದ ಆಚರಣೆ ವೇಳೆಯಲ್ಲಿ ಕಾಲು ತುಳಿದರು ಎನ್ನುವ ಕಾರಣಕ್ಕೆ ಎರಡು ಗುಂಪುಗಳ ನಡುವೆ ಜಗಳ ಉಂಟಾಗಿದೆ. ಜಗಳ ತಾರಕ್ಕೇರಿದ ಪರಿಣಾಮ, ದಾದಾಪೀರ್ ಹೊಸಮನಿ, ಮುಸ್ತಾಕ್ ಹೊಸಮನಿ ಎಂಬುವರಿಗೆ ಸೋಮು ಗುಡಿ ಎಂಬಾತ ಸೇರಿ ಹಲವರಿಂದ ಚಾಕುವಿನಿಂದ ಇರಿಯಲಾಗಿದೆ.
ಸೋಮು ಗುಡಿ ಮತ್ತು ಇತರರು ಸೇರಿ ಚಾಕು ಇರಿದ ಪರಿಣಾಮ, ತೀವ್ರವಾಗಿ ಗಾಯಗೊಂಡಿರುವಂತ ದಾದಾಪೀರ್, ಮುಸ್ತಾಕ್ ಹೊಸಮನಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇವರಲ್ಲಿ ಓರ್ವನ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ.
ಈ ವಿಷಯ ತಿಳಿದು ಎಸ್ಪಿ ದೇವರಾಜು, ಡಿವೈಎಸ್ಪಿ ಶಿವಾನಂದ ಆಸ್ಪತ್ರೆಗೆ ಭೇಟಿ ನೀಡಿ, ಗಾಳಾಯುಗಳಿಂದ ಮಾಹಿತಿ ಪಡೆದಿದ್ದಾರೆ. ಈ ಪ್ರಕರಣ ಸಂಬಂಧ ಸೋಮು, ಯಲ್ಲಪ್ಪ ಎಂಬ ಇಬ್ಬರು ಆರೋಪಿಗಳನ್ನು ಮಲ್ಲಸಮುದ್ರ ಗ್ರಾಮದಲ್ಲಿ ಬಂಧಿಸಿರೋದಾಗಿ ತಿಳಿದು ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಮಲ್ಲಸಮುದ್ರ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
BIG NEWS: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ: ಸ್ಪೋಟಕ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ