Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗದಗ ವಿವಿಗೆ ‘ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ಎಂದು ಮರು ನಾಮಕರಣ
KARNATAKA

ಗದಗ ವಿವಿಗೆ ‘ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ಎಂದು ಮರು ನಾಮಕರಣ

By kannadanewsnow0921/01/2025 7:10 PM

ಬೆಂಗಳೂರು: ಮಹಾತ್ಮಾಗಾಂಧೀಜಿಯವರ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಗದಗ ನಗರದಲ್ಲಿ ಸ್ಥಾಪನೆಯಾಗಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ‘ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ’ ಎಂದು ಬೆಳಗಾವಿಯಲ್ಲಿ ಇಂದು ಮರು ನಾಮಕರಣ ಮಾಡಲಾಯಿತು.

ಮಹಾತ್ಮ ಗಾಂಧೀಜಿಯವರು ಬೆಳಗಾವಿಯಲ್ಲಿ 1924ರಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಮಹೋನ್ನತ ಸಂದರ್ಭದ ಶತಮಾನೋತ್ಸವ ಐತಿಹಾಸಿಕ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಸದಸ್ಯರಾದ ಪ್ರಿಯಾಂಕಾ ಗಾಂಧಿ ವಾರ್ಧಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರ ಸಮ್ಮುಖದಲ್ಲಿ ವಿಶ್ವವಿದ್ಯಾಲಯ ಹೊಸ ಹೆಸರನ್ನು ಹೊಂದಿತು.

ಅಂದಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಇಂದಿನ ಕಾನೂನು ಮತ್ತು ಪ್ರವಾಸೊದ್ಯಮ ಸಚಿವರಾದ ಮಾನ್ಯ ಡಾ. ಹೆಚ್. ಕೆ.ಪಾಟೀಲ ಅವರ ಪರಿಕಲ್ಪನೆಯಂತೆ ಗದಗದಲ್ಲಿ ನಾಗಾವಿ ಬಳಿ 353 ಎಕರೆ ವಿಸ್ತಿರಣದಲ್ಲಿ ಕಪ್ಪತಗುಡ್ಡ ತಪ್ಪಲಿನ ನಿಸರ್ಗದಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿನಿಯ 2016 ರಡಿಯಲ್ಲಿ  ಸ್ಥಾಪಿಸಲಾಯಿತು. ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯಗಳಲ್ಲಿ ಸುಸ್ಥಿರ ಅಭಿವೃದ್ಧಿಯ ಕುರಿತು ಬೋಧನೆ, ತರಬೇತಿ ಮತ್ತು ಸಂಶೋಧನೆಗಾಗಿ ದೇಶದಲ್ಲಿನ ಏಕಮಾತ್ರ ವಿಶ್ವವಿದ್ಯಾಲಯವಾಗಿದೆ.

ವಿಶ್ವವಿದ್ಯಾಲಯವು 2016ರಿಂದ ಕಾರ್ಯಾರಂಭಿಸಿದ್ದು, ವಿಶ್ವವಿದ್ಯಾಲಯವು ವಿವಿಧ ವಿಭಾಗಗಳಲ್ಲಿ 10 ಸ್ನಾತಕೋತ್ತರ ಕಾರ್ಯಕ್ರಮ ಹಾಗೂ 5 ಸ್ನಾತಕ ಪದವಿ ಕಾರ್ಯಕ್ರಮಗಳನ್ನು ಒಳಗೊಂಡಿದೆ, ವಿವಿಧ ವಿಷಯಗಳಲ್ಲಿ ಡಿಪ್ಲೊಮೊ, ಸ್ನಾತಕೋತ್ತರ ಡಿಪ್ಲೊಮೊ ಹಾಗೂ ಸರ್ಟಿಪಿಕೇಟ್ ಕೋರ್ಸಗಳನ್ನು ಪ್ರಾರಂಭಿಸಿದೆ. ವಿಶ್ವವಿದ್ಯಾಲಯದಲ್ಲಿ ರಾಜ್ಯದ ಹಾಗೂ ದೇಶದ ವಿವಿಧ ಭಾಗಗಳಿಂದ ಸುಮಾರು 1200ಕ್ಕೂ ಮಿಗಿಲು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ವಿಶ್ವವಿದ್ಯಾಲಯವು ಶೈಕ್ಷಣಿಕ, ಸಂಶೋಧನೆ, ಸಮುದಾಯ, ತರಬೇತಿ ಮತ್ತು ವಿಸ್ತರಣೆಯನ್ನು ಕೇಂದ್ರೀಕರಿಸಿ ಸುಮಾರು 40 ವಿವಿಧ ಯೋಜನೆಗಳು ಹಾಗೂ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿದೆ.

ವಿಶ್ವವಿದ್ಯಾಲಯದ ತರಬೇತಿ, ಪ್ರಕಟಣೆ ಮತ್ತು ಮೇಲ್ವಿಚಾರಣೆ ಕೇಂದ್ರದಿAದ ಪಂಚಾಯತ್ ರಾಜ್ ವ್ಯವಸ್ಥೆಯ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಅಧಿಕಾರಿ/ಸಿಬ್ಬಂದಿಗಳಿಗೆ ಅಗತ್ಯತೆಗೆ ಅನುಗುಣವಾಗಿ  ತರಬೇತಿಗಳನ್ನು ಆಯೋಜಿಸಲಾಗುತ್ತಿದೆ. ಇದುವರೆಗೆ ನಿರಂತರವಾಗಿ 4000ಕ್ಕೂ ಅಧಿಕ ಅರಿವು ಕೇಂದ್ರಗಳಾದ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಿಗೆ ಗಣಕಯಂತ್ರ ಹಾಗೂ ಗ್ರಂಥಾಲಯ ನಿರ್ವಹಣೆ ಬಗ್ಗೆ 5 ದಿನಗಳ ವಸತಿ ಸಹಿತ ತರಬೇತಿ ನೀಡಲಾಗಿದೆ. ಇದಲ್ಲದೇ ಜಲಸಂಜೀವಿನಿ ಯೋಜನೆಯ ಸಿಬ್ಬಂದಿಗಳಿಗೆ ತರಬೇತುದಾರರ ತರಬೇತಿ ಆಯೋಜಿಸಲಾಗಿದೆ. ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ರಾಷ್ಟಿçÃಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ವಿಶ್ವವಿದ್ಯಾಲಯದಿಂದ ವಿವಿಧ ಚಟುವಟಿಕೆಗಳು, ಲೇಖನಗಳು ಸಂದರ್ಶನಗಳು, ಸಮ್ಮೇಳನ, ವಿಚಾರಗೋಷ್ಠಿ, ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯ ಪ್ರಚಲಿತ ವಿಷಯಗಳನ್ನೊಳಗೊಂಡ ‘ಗ್ರಾಮೋದಯ’ ತ್ರೈಮಾಸಿಕ ಪತ್ರಿಕೆ ಹಾಗೂ ವಿವಿಧ ಪಠ್ಯಪುಸ್ತಕಗಳನ್ನು ಪ್ರಕಟಿಸಲಾಗಿದೆ. ಸಂಶೋಧನೆ, ಅನ್ವೇಷಣೆ ಮತ್ತು ಮೌಲ್ಯ ಮಾಪನ ಕೇಂದ್ರ ದಿಂದ ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಾಲಾ ಮಕ್ಕಳಿಗೆ ನೀಡಲಾಗುವ ಮದ್ಯಾಹ್ನದ ಬಿಸಿ ಊಟದಲ್ಲಿ ಮೊಟ್ಟೆ ನೀಡುವುದರಿಂದ ಮಕ್ಕಳ ಪೌಸ್ಟಿಕತೆಯಲ್ಲಿ ಉಂಟಾಗುವ ಪರಿಣಾಮದ ಕುರಿತು ಅಧ್ಯಯನ ಕೈಗೊಂಡ ಪರಿಣಾಮ ರಾಜ್ಯದ ಎಲ್ಲ ಶಾಲೆಗಳ ವಿದ್ಯಾರ್ಥಿಗಳಿಗೆ ಮೊಟ್ಟೆಯನ್ನು ನೀಡಲಾಗುತ್ತಿದೆ. ಇದಲ್ಲದೆ, ಅಮೃತ್ ಗ್ರಾಮ ಯೋಜನೆಯಡಿಯಲ್ಲಿ 750 ಗ್ರಾಮ ಪಂಚಾಯತ್ಗಳ ಅಧ್ಯಯನ ಕೈಗೊಂಡು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.

ವಿಶ್ವವಿದ್ಯಾಲಯವು ಭಾರತದ ಶ್ರೇಷ್ಠ ಸಮಾಜ ಸುಧಾರಕರು, ದೇಶ ಭಕ್ತರು, ತತ್ವಜ್ಞಾನಿಗಳು ಹಾಗೂ ಚಿಂತಕರುಗಳಾದ ಮಹಾತ್ಮಾ ಗಾಂಧಿಜೀ ರವರ ಮೂಲಭೂತ ತತ್ವಗಳ ಮೇಲೆ ತನ್ನ ಚಟುವಟಿಕೆಗಳನ್ನು ನಡೆಸುತ್ತಿದೆ. ವಿಶ್ವವಿದ್ಯಾಲಯದ ಆವರಣದಲ್ಲಿರುವ ಸಬರಮತಿ ಆಶ್ರಮವು ಒಂದು ಪ್ರೇರಣಾ ಕೇಂದ್ರವಾಗಿದ್ದು, ಇಲ್ಲಿ ಗಾಂಧಿಜೀಯವರ ಚಿಂತನೆ ಮತ್ತು ಕೃತಿಗಳ ಕುರಿತು ಅಧ್ಯಯನ ಹಾಗೂ ಸತ್ಸಂಗ ಕಾರ್ಯಕ್ರಮಗಳು ನಿರಂತರವಾಗಿ ಜರಗುತ್ತಿವೆ. ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಭವ್ಯವಾದ ಪುತ್ಥಳಿಯನ್ನು ಸ್ವಾಪಿಸಲಾಗಿದೆ.

ವಿಶ್ವವಿದ್ಯಾಲಯದಿಂದ ಪ್ರತಿ ತಿಂಗಳು ಗ್ರಾಮೀಣಾಭಿವೃದ್ಧಿ ವಿಷಯಗಳನ್ನೊಳಗೊಂಡು ಶೈಕ್ಷಣಿಕ, ಸಂಶೋಧನೆ, ತರಬೇತಿ, ಸಮ್ಮೇಳನ, ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಆರೋಗ್ಯ ಇತರೆ ವಿಷಯಗಳ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿಶ್ವವಿದ್ಯಾಲಯದಿಂದ ಪದವಿ ಪಡೆದ ಅನೇಕರು ಗ್ರಾಮೀಣ ಅಭಿವೃದ್ಧಿ ಹಾಗೂ ಇತರೆ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಮಾಜಕ್ಕೆ ತಮ್ಮದೆ ಆದ ಕೊಡುಗೆ ನೀಡುತ್ತಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಪತಿಗಳು (ಪ್ರಬಾರ) ಹಾಗೂ ಕುಲಸಚಿವ ಪ್ರೊ. ಡಾ. ಸುರೇಶ ವಿ. ನಾಡಗೌಡರ ತಿಳಿಸಿದ್ದಾರೆ.

ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಮಹಾತ್ಮಾಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 39ನೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮಹಾ ಅಧಿವೇಶನವು 1924ರಲ್ಲಿ ಬೆಳಗಾವಿಯಲ್ಲಿ ಜರುಗಿ ನೂರು ವರ್ಷಗಳು ಕಳೆದು ಶತಮಾನೋತ್ಸವ ಆಚರಿಸುತ್ತಿರುವ ಈ ಸುಸಂದರ್ಭದಲ್ಲಿ ಮಹಾತ್ಮಾ ಗಾಂಧೀಜಿಯವರ ಸ್ಮರಣಾತ್ಮಕವಾಗಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವನ್ನು ‘ಮಹಾತ್ಮಾಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ’ ಎಂದು ಮರು ನಾಮಕರಣ ಮಾಡಿರುವುದು ಅತ್ಯಂತ ಸೂಕ್ತವಾಗಿದೆ ಎಂದಿದ್ದಾರೆ.

ವಿಶ್ವವಿದ್ಯಾಲಯದಲ್ಲಿನ ವಿಷಯಗಳು ಬಹುಶಿಸ್ತೀಯವಾಗಿದ್ದು ಗ್ರಾಮೀಣಾಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುತ್ತವೆ. ವಿದ್ಯಾರ್ಥಿಗಳಿಗೆ ಬೋಧನೆಯ ಜೊತೆಗೆ ಕೃಷಿ ಚಟುವಟಿಕೆ, ಸತ್ಸಂಗ, ಎನ್.ಎಸ್.ಎಸ್, ಸೆಮಿನಾರ್ಗಳು, ಸ್ಪರ್ಧಾತ್ಮಕ ಪರೀಕ್ಷೆ, ಹಾಗೂ ಅಗತ್ಯ ವೃತ್ತಿ ಕೌಶಲ್ಯಗಳನ್ನು ಬೆಳೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ವಿಶ್ವವಿದ್ಯಾಲಯದಿಂದ ಹೊರ ಬರುವ ಪದವೀಧರರು ಮಹಾತ್ಮ ಗಾಂಧೀಜಿಯವರ ಆಶಯದಂತೆ ಗ್ರಾಮೀಣ ಪರಿಸರದಲ್ಲಿ ಈ ನಾಡನ್ನು ನಿರ್ಮಾಣ ಮಾಡುವ ಹೊಸ ಆಶಯಗಳನ್ನು ಹೊಂದಿರುತ್ತಾರೆ. ಗಾಂಧಿ ಅವರ ತತ್ತ್ವ  ಆದರ್ಶಗಳನ್ನು ಇಂದಿನ ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ವಿಶ್ವವಿದ್ಯಾಲಯ ಮಾಡುತ್ತಿದೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ತಿರುಪತಿಗೆ ತೆರಳುವ ಕರ್ನಾಟಕದ ಭಕ್ತರಿಗೆ ಗುಡ್ ನ್ಯೂಸ್: ರಾಜ್ಯ ಛತ್ರ ಓಪನ್, ಈ ರೀತಿ ಬುಕ್ ಮಾಡಿ

BREAKING : ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ನಟ ‘ಸೈಫ್ ಅಲಿಖಾನ್’ ಡಿಸ್ಚಾರ್ಜ್ : ಫೋಟೋ ವೈರಲ್ | Saif Ali Khan

Share. Facebook Twitter LinkedIn WhatsApp Email

Related Posts

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM2 Mins Read

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM1 Min Read

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM1 Min Read
Recent News

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM
State News
KARNATAKA

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

By kannadanewsnow0506/07/2025 7:41 PM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.