ಬೆಂಗಳೂರು: ದಿನಾಂಕ 02-10-2024ರಂದು ಗಾಂಧಿ ಜಯಂತಿ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ದಿನಾಂಕ: 02-10-2024 ಬುಧವಾರದಂದು ” ಗಾಂಧಿ ಜಯಂತಿ ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ಅವರು ತಿಳಿಸಿದ್ದಾರೆ.