Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕರ್ನಾಟಕ ರಾಜಕೀಯ ದೆಹಲಿ ಶಿಫ್ಟ್: ಇಂದು ತಡರಾತ್ರಿ ಸಿಎಂ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಪ್ರಯಾಣ

ರಾಜ್ಯಾದ್ಯಂತ 995 ಕೆರೆಗಳ ಪುನಶ್ಚೇತನ: ಸಾಗರದ ಉಳ್ಳೂರಿನಲ್ಲಿ ಕೆರೆ ಸಮಿತಿ ರಚನೆ ಧರ್ಮಸ್ಥಳ ಯೋಜನೆ ಯಶಸ್ಸು

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಸಿಎಂ ಸಿದ್ಧರಾಮಯ್ಯ ಉದ್ಘಾಟನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ರಾಜ್ಯಾದ್ಯಂತ ಗಾಂಧಿ ನಡಿಗೆ, ಸ್ವಚ್ಛತೆ ಬಗ್ಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ
KARNATAKA

ಇಂದು ರಾಜ್ಯಾದ್ಯಂತ ಗಾಂಧಿ ನಡಿಗೆ, ಸ್ವಚ್ಛತೆ ಬಗ್ಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: “ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಕ್ಟೋಬರ್ 2ರ ಇಂದು ರಾಜ್ಯಾದ್ಯಂತ ‘ಗಾಂಧಿ ನಡಿಗೆ’ ಹಾಗೂ ‘ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದ ಮೊದಲ ಭಾಗವಾಗಿ ಅಕ್ಟೋಬರ್ 2ರ ಇಂದು ಗಾಂಧಿ ಜಯಂತಿಯಂದು 1 ಕಿ. ಮೀ. ‘ಗಾಂಧಿ ನಡಿಗೆ’ ಮತ್ತು ‘ಸ್ವಚ್ಛತಾ ಪ್ರತಿಜ್ಞಾ ಸ್ವೀಕಾರ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ ಜಿಲ್ಲಾ, ತಾಲೂಕು ಕೇಂದ್ರ ಹಾಗೂ ಪಾಲಿಕೆ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಬೆಂಗಳೂರಿನಲ್ಲಿಯೂ ಇಂದು ಬೆಳಗ್ಗೆ 9 ಗಂಟೆಗೆ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ನಡಿಗೆ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳನ್ನು  ಭಾಗಿಯಾಗಲಿದ್ದಾರೆ” ಎಂದು ತಿಳಿಸಿದರು.

500 ಶಾಲಾ ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ

“ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರ ಜನ್ಮದಿನವೂ ಒಂದೇ ದಿನ ಆಗಿರುವ ಕಾರಣ ಇಬ್ಬರ ಪ್ರತಿಮೆಗೂ ಮಾಲಾರ್ಪಣೆ ಮಾಡಲಾಗುವುದು. ನಂತರ ನಡಿಗೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಾಗೂ ಬೆಂಗಳೂರಿನ 500 ಶಾಲಾ, ಕಾಲೇಜು ಮಕ್ಕಳಿಗೆ ಜೂಮ್ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮ, ಗಾಂಧಿ ಅವರ ಆದರ್ಶವನ್ನು ಯುವ ಪೀಳಿಗೆಗೆ ತಲುಪಿಸಲು ಈ ಕಾರ್ಯಕ್ರಮ ರೂಪಿಸಿದೆ” ಎಂದರು.

ಶ್ವೇತ ವಸ್ತ್ರ ಧರಿಸಿ ನಡಿಗೆ

“ಜಿಲ್ಲಾ ಕೇಂದ್ರದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ. ಈ ನಡಿಗೆ ವೇಳೆ ಬಿಳಿ ವಸ್ತ್ರ, ಗಾಂಧಿ ಟೋಪಿ ಧರಿಸಿ ಹೆಜ್ಜೆ ಹಾಕುವಂತೆ ಮನವಿ ಮಾಡಲಾಗುವುದು” ಎಂದು ತಿಳಿಸಿದರು.

“ಗಾಂಧಿ ಜಯಂತಿಯನ್ನು ವಿಶಿಷ್ಟವಾಗಿ ಆಚರಣೆ ಮಾಡುತ್ತಿದ್ದು, ಇಡೀ ವರ್ಷ ಗಾಂಧೀಜಿ ಅವರ ಆಚಾರ ವಿಚಾರವನ್ನು ಯುವ ಪೀಳಿಗೆಗೆ ತಿಳಿಸಲು ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತ್ಯೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING: ಕರ್ನಾಟಕ ರಾಜಕೀಯ ದೆಹಲಿ ಶಿಫ್ಟ್: ಇಂದು ತಡರಾತ್ರಿ ಸಿಎಂ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಪ್ರಯಾಣ

2 Mins Read

ರಾಜ್ಯಾದ್ಯಂತ 995 ಕೆರೆಗಳ ಪುನಶ್ಚೇತನ: ಸಾಗರದ ಉಳ್ಳೂರಿನಲ್ಲಿ ಕೆರೆ ಸಮಿತಿ ರಚನೆ ಧರ್ಮಸ್ಥಳ ಯೋಜನೆ ಯಶಸ್ಸು

2 Mins Read

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಸಿಎಂ ಸಿದ್ಧರಾಮಯ್ಯ ಉದ್ಘಾಟನೆ

2 Mins Read
Recent News

BREAKING: ಕರ್ನಾಟಕ ರಾಜಕೀಯ ದೆಹಲಿ ಶಿಫ್ಟ್: ಇಂದು ತಡರಾತ್ರಿ ಸಿಎಂ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಪ್ರಯಾಣ

ರಾಜ್ಯಾದ್ಯಂತ 995 ಕೆರೆಗಳ ಪುನಶ್ಚೇತನ: ಸಾಗರದ ಉಳ್ಳೂರಿನಲ್ಲಿ ಕೆರೆ ಸಮಿತಿ ರಚನೆ ಧರ್ಮಸ್ಥಳ ಯೋಜನೆ ಯಶಸ್ಸು

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಸಿಎಂ ಸಿದ್ಧರಾಮಯ್ಯ ಉದ್ಘಾಟನೆ

ಮರಣಕ್ಕೂ 24 ಗಂಟೆಗಳ ಮುನ್ನ ಕಾಣಿಸಿಕೊಳ್ಳುವ 3 ಪ್ರಮುಖ ಲಕ್ಷಣಗಳಿವು

State News
KARNATAKA

BREAKING: ಕರ್ನಾಟಕ ರಾಜಕೀಯ ದೆಹಲಿ ಶಿಫ್ಟ್: ಇಂದು ತಡರಾತ್ರಿ ಸಿಎಂ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಪ್ರಯಾಣ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಹೈಕಮಾಂಡ್ ಮಟ್ಟದ ಸಂಚಲನ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಲ್ಲೇ ಇದೀಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

ರಾಜ್ಯಾದ್ಯಂತ 995 ಕೆರೆಗಳ ಪುನಶ್ಚೇತನ: ಸಾಗರದ ಉಳ್ಳೂರಿನಲ್ಲಿ ಕೆರೆ ಸಮಿತಿ ರಚನೆ ಧರ್ಮಸ್ಥಳ ಯೋಜನೆ ಯಶಸ್ಸು

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಸಿಎಂ ಸಿದ್ಧರಾಮಯ್ಯ ಉದ್ಘಾಟನೆ

BREAKING : ಬಿಟ್ ಕಾಯಿನ್ ಬಹುಕೋಟಿ ಹಗರಣ ಕೇಸ್ : ಮೂವರು ಆರೋಪಿಗಳಿಂದ ಲಕ್ಷಾಂತರ ಮೌಲ್ಯದ ಬಿಟ್ ಕಾಯಿನ್ ವಶಕ್ಕೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.