Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ವ ಜನಾಂಗದ ಶಾಂತಿಯ ತೋಟದ ನಾಯಕ ಗಾಂಧೀಜಿ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ಸರ್ವ ಜನಾಂಗದ ಶಾಂತಿಯ ತೋಟದ ನಾಯಕ ಗಾಂಧೀಜಿ: ಡಿಸಿಎಂ ಡಿ.ಕೆ.ಶಿವಕುಮಾರ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು : “ಮಹಾತ್ಮ ಗಾಂಧೀಜಿ ಅವರು ಸರ್ವ ಜನಾಂಗದ ಶಾಂತಿಯ ತೋಟದ ನಾಯಕ. ಇವರು ಕೇವಲ ವ್ಯಕ್ತಿಯಲ್ಲ, ಶಕ್ತಿ ಮತ್ತು ಸ್ಪೂರ್ತಿ. ರಾಷ್ಟ್ರಪಿತ ದೇಶದ ಧೀಮಂತ, ಇಡೀ ವಿಶ್ವಕ್ಕೆ ಶಾಂತಿ ಮಂತ್ರ ಹೇಳಿಕೊಟ್ಟ ಮಹಾನ್ ನಾಯಕ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಮಹಾತ್ಮ ಗಾಂಧಿ ಅವರ 155 ನೇ ಜನ್ಮದಿನದ ಅಂಗವಾಗಿ ಸ್ವಚ್ಛತಾ ಆಂದೋಲನದ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಉಪವಾಸ, ಸತ್ಯಾಗ್ರಹವೇ ಇವರ ಆಯುಧ. ಬಾಂಬು, ಬಂದೂಕುಗಳಿಲ್ಲದೆ ಅಹಿಂಸೆಯ ಮೂಲಕ ಹೋರಾಟದ ಹಾದಿಯನ್ನು ಹೇಳಿಕೊಟ್ಟವರು. ಮುಂದಿನ ಒಂದು ವರ್ಷಗಳ ಕಾಲ ಮಹಾತ್ಮನನ್ನು ಸ್ಮರಿಸಲು ‘ಗಾಂಧಿ ಭಾರತ’ ಎನ್ನುವ ಕಾರ್ಯಕ್ರಮ ರೂಪಿಸಲಾಗಿದೆ” ಎಂದರು.

“ಶಿವನ ಧ್ಯಾನ, ರಾಮನ ತ್ಯಾಗ, ಬುದ್ಧನ ಪ್ರೀತಿ, ಏಸುವಿನ ಸಹನೆ, ಮಹಮದ್ ಪೈಗಂಬರ್ ಅವರ ಮಾನವೀಯತೆಯನ್ನು ಒಳಗೊಂಡ ಸ್ವರೂಪವೇ ಮಹಾತ್ಮಾ ಗಾಂಧಿ” ಎಂದರು.

“ನನ್ನ ಜೀವನವೇ ನನ್ನ ಸಂದೇಶ ಎಂದು ನುಡಿದಂತೆ ನಡೆದವರು ಗಾಂಧಿ. ಇವರ ಆಚಾರ, ವಿಚಾರ, ತತ್ವ, ಆಶಯಗಳನ್ನು ಇಂದಿನ ಯುವ ಪೀಳಿಗೆಗೆ ತಲುಪಿಸುವ ಕೆಲಸ ನಮ್ಮ ಸರ್ಕಾರ ಮಾಡಲಿದೆ” ಎಂದು ಹೇಳಿದರು.

“ಲಾಠಿ ಪೆಟ್ಟು, ಬೂಟಿನ ಏಟನ್ನು ಸಹಿಸಿಕೊಂಡು, ಅಹಿಂಸೆಯಿಂದ ಏನು ಬೇಕಾದರೂ ಸಾಧಿಸಬಹುದು ಎಂದು ತೋರಿಸಿಕೊಟ್ಟವರು ಗಾಂಧಿ. ನೂರು ವರ್ಷದ ಹಿಂದೆ ಬೆಳಗಾವಿಯ ಅಧಿವೇಶನದಲ್ಲಿ ಸ್ವಾತಂತ್ರ ಹೋರಾಟದ ನೇತೃತ್ವ ವಹಿಸಿದ್ದು ಈ ದೇಶದ ಪುಣ್ಯ. ನಾವು ಇದನ್ನು ಸಂಭ್ರಮದಿಂದ ಆಚರಿಸಬೇಕು” ಎಂದು ತಿಳಿಸಿದರು.

“ಪ್ರತಿ ಹಳ್ಳಿಯೂ ಗಣರಾಜ್ಯವಾಗಬೇಕು ಎಂದು ಕನಸು ಕಂಡವರು. ನಾನು ಈ ಹಿಂದೆ ಸಹಕಾರ ಸಚಿವನಾಗಿದ್ದಾಗ ಒಂದು ಊರಿಗೆ ಶಾಲೆ ಹಾಗೂ ಸಹಕಾರ ಸಂಘವಿರಬೇಕು ಎಂದು ಯೋಜನೆ ರೂಪಿಸಿದ್ದೆವು. ಪಂಚಾಯಿತಿಯಿಂದ ಪಾರ್ಲಿಮೆಂಟಿನ ತನಕ ಅಧಿಕಾರ ವಿಕೇಂದ್ರೀಕರಣದ ಕನಸು ಕಂಡವರು” ಎಂದರು.

ಬದನವಾಳುವಿನಲ್ಲಿ ಸೌಹಾರ್ದ ರಸ್ತೆ ನಿರ್ಮಾಣ

“ನಂಜನಗೂಡು ಬಳಿಯ ಬದನವಾಳುವಿನಲ್ಲಿ, ಸವರ್ಣೀಯರು ಮತ್ತು ಪರಿಶಿಷ್ಟ ಜಾತಿಗಳ ನಡುವೆ 30 ವರ್ಷಗಳ ಹಿಂದೆ ಸಂಘರ್ಷ ಉಂಟಾಗಿತ್ತು. ಇದನ್ನು ಹೋಗಲಾಡಿಸಲು, ಎರಡು ವರ್ಷದ ಹಿಂದೆ ಭಾರತ್ ಜೋಡೊ ಯಾತ್ರೆ ಸಂದರ್ಭದಲ್ಲಿ ಗಾಂಧಿ ಜಯಂತಿ ದಿನ, ರಾಹುಲ್ ಗಾಂಧಿ ಅವರ ಜೊತೆಗೂಡಿ ಆ ಊರಿನಲ್ಲಿ ಭಾರತ್ ಜೋಡೊ ರಸ್ತೆ ನಿರ್ಮಾಣ ಮಾಡಿ, ಇತಿಹಾಸ ಸೃಷ್ಟಿಸಲಾಯಿತು” ಎಂದರು.

“ಸ್ವಚ್ಛತೆಗೆ ಹೆಚ್ಚು ಆದ್ಯತೆ ಕೊಟ್ಟವರು ಗಾಂಧೀಜಿ. ಆದಕಾರಣ ‘ಗಾಂಧಿ ನಡಿಗೆ’ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಯಿತು. ಕಸವನ್ನು ಎಲ್ಲೆಂದರಲ್ಲಿ ಎಸೆಯಬಾರದು ಮತ್ತು ಪೌರಕಾರ್ಮಿಕರಿಗೆ ಗೌರವ ನೀಡಬೇಕು ಎಂದು ಅರಿವು ಮೂಡಿಸುವ ನಿಟ್ಟಿನಲ್ಲಿ ಮಕ್ಕಳಿಗೆ ಪ್ರತಿಜ್ಞೆಯನ್ನು ಬೋಧಿಸಲಾಗುವುದು” ಎಂದು ಹೇಳಿದರು.

“ಶಾಲಾ ಮಕ್ಕಳಲ್ಲಿ ನಾಯಕತ್ವ ಗುಣವನ್ನು ಬೆಳೆಸಬೇಕು ಎಂದು ಬಿಬಿಎಂಪಿಯ ಕಾರ್ಯಕ್ರಮಗಳಲ್ಲಿ ಸರ್ಕಾರಿ ಶಾಲಾ ಮಕ್ಕಳೇ ನಿರೂಪಣೆ ಸೇರಿದಂತೆ ಕಾರ್ಯಕ್ರಮವನ್ನು ರೂಪಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೆ. ಅದೇ ರೀತಿ ಈ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಮಕ್ಕಳು ರೂಪಿಸಿ ಕೊಟ್ಟಿದ್ದಾರೆ” ಎಂದರು.

“ಪಕ್ಷಬೇದವನ್ನು ಮರೆತು ಗಾಂಧೀಜಿಯ ಆಶಯಗಳನ್ನು ನಾವು ಜನರಿಗೆ ತಲುಪಿಸಬೇಕು. ಇಡೀ ವಿಶ್ವವೇ ಗಾಂಧಿಯ ಆಶಯಗಳನ್ನು ಒಪ್ಪಿಕೊಂಡಿದೆ. ಗಾಂಧೀಜಿಯ ವಿಚಾರದಲ್ಲಿ ರಾಜಕೀಯ ಮುಖ್ಯವಾಗಬಾರದು. ವಿದ್ಯಾರ್ಥಿಗಳಿಗೆ, ಯುವಕರಿಗೆ ಗಾಂಧಿ ವಿಚಾರ ತಲುಪಿಸುವುದು ನಮ್ಮ ಕರ್ತವ್ಯವಾಗಬೇಕು” ಎಂದು ಹೇಳಿದರು.

BREAKING: ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಗೆ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಆಯ್ಕೆ

ಗಮನಿಸಿ : ಆಧಾರ್ ಕಾರ್ಡ್‌ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

2 Mins Read

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

1 Min Read

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

1 Min Read
Recent News

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

BREAKING: ಜಾಗತಿಕವಾಗಿ ಚಾಟ್‌ಜಿಪಿಟಿ ಸರ್ವರ್ ಡೌನ್, ಕೋಟ್ಯಂತರ ಬಳಕೆದಾರರು ಕಂಗಾಲು | ChatGPT down

State News
KARNATAKA

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ಬಡ ಕುಟುಂಬದ ಜಮೀನಿಗೆ ನುಗ್ಗಿ, ಬೆಳೆದು ನಿಂತಿದ್ದ ಫಸಲನ್ನು ಕಿತ್ತು ಹಾಕಿರುವುದು…

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.