ನವದೆಹಲಿ: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿರುವುದಕ್ಕೆ ಸಂಬಂಧಪಟ್ಟಂತೆ ರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಇದೇ ವೇಳೆ ಮಂಗಳವಾರ ಈ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್.
ಈ ನಡುವೆ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ರಾಜ್ಯ ಹೈಕೋರ್ಟ್ ಅನುಮತಿ ನೀಡಿದ್ದು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಅಚರಣೆಗೆ ಅಡ್ಡಿಯಿಲ್ಲ ಎಂದಿದೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.
ಈ ವೇಳೆ ಅನುಮತಿ ಕೋರಿದ ಅರ್ಜಿಗಳನ್ನ ಪರಿಶೀಲಿಸಿ ಅನುಮತಿ ನೀಡಬಹುದು ಎಂದಿದ್ದು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಅಚರಣೆಗೆ ಅಡ್ಡಿಯಿಲ್ಲ ಎಂದಿದೆ. ಅದ್ರಂತೆ, ಅಗಸ್ಟ್ 31ರಿಂದ ನಿರ್ದಿಷ್ಟ ಅವಧಿಗೆ ಗಣೇಶೋತ್ಸವಕ್ಕೆ ಹೈಕೋರ್ಟ್ ಅನುಮತಿ ನೀಡಿದೆ