ಬೆಂಗಳೂರು: ನಿನ್ನೆ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸ್ಪೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದಂತ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮತ್ತೂರಿನಲ್ಲಿ ನಡೆದಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಾಧ್ಯಂತ ಪಟಾಕಿ, ಸಿಡಿಮದ್ದು ಇನ್ನಿತರ ಸ್ಪೋಟಕ ವಸ್ತು ಸಿಡಿಸುವುದು ನಿಷೇಧಿಸಿ ಡಿಸಿ ಆದೇಶಿಸಿದ್ದಾರೆ.
ಈ ಕುರಿತಂತೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕಾರ್ ಅವರು ಆದೇಶಸಿದ್ದು, ಗಣೇಶ ಹಬ್ಬದ ಆಚರಣೆಯ ವೇಳೆಯಲ್ಲಿ ಪಟಾಕಿ, ಸಿಡಿಮದ್ದು ಇನ್ನಿತರ ಸ್ಪೋಟಕ ವಸ್ತು ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮತ್ತೂರಿನಲ್ಲಿ ನಿನ್ನೆ ಪಟಾಕಿ ಸ್ಪೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದ್ದನು. ಅಲ್ಲದೇ ಆರು ಮಂದಿ ಗಾಯಗೊಂಡಿದ್ದರು. ಹೀಗಾಗಿ ಸಾರ್ವಜನಿಕರ ಹಿತದೃಷ್ಟಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಪಟಾಕಿ ನಿಷೇಧಿಸಿ ಆದೇಶಿಸಿದ್ದಾರೆ.
‘ಹೊಸ ಆನ್ಲೈನ್ ಗೇಮಿಂಗ್ ಕಾಯ್ದೆಗೆ ನ್ಯಾಯಾಲಯಗಳು ಅಡ್ಡಿಯಾಗಲು ಸಾಧ್ಯವಿಲ್ಲ’: ಕರ್ನಾಟಕ ಹೈಕೋರ್ಟ್ ಗೆ ಕೇಂದ್ರ ಸರ್ಕಾರ