ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ದರೋಡೆ, ಸುಲಿಗೆ ಕಳ್ಳತನ, ಲೈಂಗಿಕ ದೌರ್ಜನ್ಯ ಹೆಚ್ಚುತ್ತಲೇ ಇದೆ. ಆದರೆ ಯಾವುದೇ ಕ್ರಮ ಮಾತ್ರ ಕೈಗೊಂಡಿಲ್ಲ. ಇದೀಗ ನಗರದಲ್ಲಿ ಮತ್ತೊಂದು ಲೈಂಗಿಕ ಪ್ರಕರಣ ಬೆಳಕಿಗೆ ಬಂದಿದೆ.
ನಗರದ ಬ್ಯಾಟರಾಯನಪುರ ಠಾಣೆಯಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೋಷಕರು ದೂರು ನೀಡಿದ್ದಾರೆ. ಪರಿಚಯ ಇರುವ ಹುಡುಗರೇ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆದರೆ, ಬೇರೆ ಬೇರೆ ಸಮಯದಲ್ಲಿ ಯುವತಿಯನ್ನು ಯುವಕರು ಬಳಸಿಕೊಂಡಿದ್ದು, ಯುವತಿಯ ಕೆಲ ಖಾಸಗಿ ಫೋಟೋಗಳನ್ನು ಸಹ ಇಟ್ಟುಕೊಂಡಿರುವ ಬಗ್ಗೆ ಕೂಡ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಬ್ಯಾಟರಾಯನಪುರ ಪೊಲೀಸ್ ಸಿಬ್ಬಂದಿ ತನಿಖೆ ಮುಂದುವರಸಿದ್ದು, ಕೆಲ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.