ಲಕ್ನೋ : 18 ವರ್ಷದ ಯುವತಿಯೊಬ್ಬಳ ಮೇಲೆ ಆಟೋ ಚಾಲಕ ಮತ್ತು ಆತನ ಸಹಾಯಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಲಕ್ನೋದಲ್ಲಿ ನಡೆದಿದೆ.
ಟ್ಯೂಷನ್ ಮುಗಿಸಿ ಮನೆಗೆ ಮರಳಲು ಆಟೋದಲ್ಲಿ ತೆರಳಿದ್ದ ಯುವತಿಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ನಡೆಸಿ ಲಕ್ನೋ ನಗರದ ಮಧ್ಯ ಭಾಗದಲ್ಲಿರುವ ಪ್ರಮುಖ ಕ್ರಾಸಿಂಗ್ ಬಳಿ ಸಂತೃಸ್ತೆಯನ್ನು ಆಟೋದಿಂದ ತಳ್ಳಲಾಗಿದೆ.
ನಂತರ ಆಟೋ ಚಾಲಕ ಸೇರಿ ಹಲವರು ತನಗೆ ಕೊಲೆ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾನೆ ಎಂದು ಸಂತ್ತಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ